ದುಬೈ: ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ನಿಕೋಲಸ್ ಪೂರನ್ ಬದಲು ಕ್ರಿಸ್ ಜೋರ್ಡನ್ ತಂಡಕ್ಕೆ ಸೇರಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ.
ಸಿಎಸ್ಕೆ ಮತ್ತು ಪಂಜಾಬ್ ತಂಡಗಳಿಗೆ ಈ ಪಂದ್ಯವೇ ಕೊನೆಯ ಲೀಗ್ ಪಂದ್ಯವಾಗಿದೆ. ಚೆನ್ನೈ ಗೆದ್ದರೆ ಅಗ್ರಸ್ಥಾನಕ್ಕೇರಲಿದೆ. ಪಂಜಾಬ್ ಗೆದ್ದರೆ ರನ್ರೇಟ್ 6ನೇ ಸ್ಥಾನದಲ್ಲೇ ಉಳಿಯಲಿದೆ.
ಎರಡು ತಂಡಗಳು ಐಪಿಎಲ್ನಲ್ಲಿ 24 ಬಾರಿ ಮುಖಾಮುಖಿಯಾಗಿದ್ದು, ಸಿಎಸ್ಕೆ 15 ಹಾಗೂ ಪಂಜಾಬ್ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಪಂಜಾಬ್ ಕಿಂಗ್ಸ್: ಕೆಎಲ್ ರಾಹುಲ್ (ವಿಕೀ /ನಾಯಕ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ಸರ್ಫರಾಜ್ ಖಾನ್, ಶಾರುಖ್ ಖಾನ್, ಮೊಯಿಸಸ್ ಹೆನ್ರಿಕ್ಸ್, ಕ್ರಿಸ್ ಜೋರ್ಡಾನ್, ಹರ್ಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ ಇಲೆವೆನ್): ರುತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ವಿಕೀ /ನಾಯಕ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೆಜಲ್‌ವುಡ್