ಹೈದರಾಬಾದ್: ಟೀಂ ಇಂಡಿಯಾದ ಕೋಚ್ ಆಗಿರುವ ದಿ ವಾಲ್ ಖ್ಯಾತಿಯ ಕನ್ನಡಿಗ ರಾಹುಲ್ ದ್ರಾವಿಡ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭಾರತೀಯ ಕ್ರಿಕೆಟ್ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್, ತಂಡದ ನಾಯಕ ವಿಕೆಟ್ ಕೀಪರ್ಗಳಲ್ಲಿ ಒಬ್ಬರಾಗಿರುವ ರಾಹುಲ್ ದ್ರಾವಿಡ್ ಇಂದು 49ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದು, ಅವರ ಜನುಮ ದಿನಕ್ಕೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಸೇರಿದಂತೆ ಅಪಾರ ಅಭಿಮಾನಿಗಳು ಶುಭಕೋರಿದ್ದಾರೆ.
ಭಾರತದ ಮಾಜಿ ನಾಯಕ ಮತ್ತು ಪ್ರಸ್ತುತ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್ ಮಾಡಿದೆ. ಇನ್ನು ಕ್ರಿಕೆಟ್ ದೇವರೆಂದು ಕರೆಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಜಮ್ಮಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು 3ನೇ ಟೆಸ್ಟ್‌ಗೆ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಐಸಿಸಿ, ಆರ್ಸಿಬಿ, ಮುಂಬೈ, ಎಸ್ಆರ್ಹೆಚ್, ಮಾಜಿ ಕ್ರಿಕೆಟ್ ಪಟುಗಳಾದ ವಾಸಿಮ್ ಜಾಫರ್, ದೊಡ್ಡ ಗಣೇಶ್ ಸೇರಿದಂತೆ ಹಲವರು ದಿ ವಾಲ್ ಖ್ಯಾತಿಗೆ ಹುಟ್ಟುಹಬ್ಬದ ಶುಭಾಯ ಕೋರಿದ್ದಾರೆ.
ಜನನ:1973 ಜನವರಿ 11ರಂದು ಮದ್ಯಪ್ರದೇಶ ಇಂದೋರ್ನಲ್ಲಿ ಜನಿಸಿದ ದ್ರಾವಿಡ್ ಪೂರ್ಣ ಕನ್ನಡಿಗರು ಅನ್ನೋದು ನಮ್ಮ ಹೆಮ್ಮೆ. ಬಾಲಕರಾಗಿದ್ದಾಗಲೇ ಕುಟುಂಬದೊಂದಿಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್, ತಮ್ಮ ವೃತ್ತಿಯನ್ನು ಕಂಡುಕೊಂಡಿದ್ದು ಸಹ ಇಲ್ಲಿಯೇ.