ಕರ್ನಾಟಕ

karnataka

ETV Bharat / sports

ಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾಕ್ಕೆ ದ್ರಾವಿಡ್​ ಮುಖ್ಯ ಕೋಚ್: ಮೂಲಗಳ ಮಾಹಿತಿ

ಕನ್ನಡಿಗ ರಾಹುಲ್ ದ್ರಾವಿಡ್​ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

Rahul Dravid set to take over as Team India coach after T20 World Cup
ಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ದ್ರಾವಿಡ್: ಮೂಲಗಳ ಮಾಹಿತಿ

By

Published : Oct 16, 2021, 8:30 AM IST

ನವದೆಹಲಿ: ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದ ನಂತರ ಈ ಬೆಳವಣಿಗೆ ನಡೆದಿದೆ.

ರಾಹುಲ್ ದ್ರಾವಿಡ್ ರಾಷ್ಟ್ರೀಯ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಎಎನ್​ಐಗೆ ಮೂಲಗಳು ದೃಢಪಡಿಸಿದ್ದು, ಭಾರತೀಯ ತಂಡವು ಪರಿವರ್ತನೆಯ ಹಂತದಲ್ಲಿದೆ ಎಂಬ ಮಾತುಗಳು ಕೇಳಿಬಂದಿವೆ.

ರಾಹುಲ್ ದ್ರಾವಿಡ್

ಹಾಲಿ ಕೋಚ್ ರವಿಶಾಸ್ತ್ರಿ ಅವರ ಅವಧಿ ಮುಕ್ತಾಯದ ನಂತರ ರಾಹುಲ್ ದ್ರಾವಿಡ್ ಕೋಚ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಟಿ-20 ವಿಶ್ವಕಪ್ ಮುಗಿದ ನಂತರ ರವಿಶಾಸ್ತ್ರಿ ಅವರ ಅವಧಿ ಪೂರ್ಣಗೊಳ್ಳಲಿದ್ದು, ನಂತರದಲ್ಲಿ ರಾಹುಲ್ ಕೋಚ್ ಆಗುವ ಸಾಧ್ಯತೆ ಇದೆ.

ಆದರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ:ವೀರ್ ಸಾವರ್ಕರ್ ದೇಶಪ್ರೇಮ ಮತ್ತು ಶೌರ್ಯ ಪ್ರಶ್ನಾತೀತ: ಅಮಿತ್ ಶಾ

ABOUT THE AUTHOR

...view details