ಮುಂಬೈ:ಬ್ಯಾಟ್ಸ್ಮನ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ 3 ಬಾರಿಯ ಐಪಿಎಲ್ ಚಾಂಪಿಯನ್ ಸಿಎಸ್ಕೆ ಎದುರಾಳಿ ರಾಜಸ್ಥಾನ್ ತಂಡಕ್ಕೆ 189 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.
ಮುಂಬೈನ ವಾಂಖೆಡೆಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸತತ ಮೂರನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ ರುತುರಾಜ್ ಗಾಯಕ್ವಾಡ್ ಕೇವಲ 10 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ, ಸ್ಫೋಟಕ ಬ್ಯಾಟಿಂಗ್ ಮುಂದಾದ ಫಾಫ್ ಡು ಪ್ಲೆಸಿಸ್ 17 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 33 ರನ್ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾಗಿ ಮೋರಿಸ್ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಬ್ಯಾಟ್ಸ್ಮನ್ಗಳು ತಂಡದ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸುವ ಪ್ರಯತ್ನ ಮಾಡಿ ಬೇಗನೇ ವಿಕೆಟ್ ಒಪ್ಪಿಸಿದರು. ಮೊಯಿನ್ ಅಲಿ 20 ಎಸೆತಗಳಲ್ಲಿ 26 ರನ್ಗಳಿಸಿದರೆ, ರೈನಾ 18, ರಾಯುಡು 17 ಎಸೆತಗಳಲ್ಲಿ 3 ಸಿಕ್ಸರ್ಗಳ ಸಹಿತ 27 ರನ್ ಸಿಡಿಸಿದರು.
ನಂತರ ಬಂದ ಧೋನಿ 17 ಎಸೆತಗಳಲ್ಲಿ ಕೇವಲ 18 ರನ್ಗಳಿಸಿದರೆ ಔಟಾದರೆ, ಜಡೇಜಾ 8 ಸ್ಯಾಮ್ ಕರ್ರನ್ 13 ರನ್ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಅಬ್ಬರಿಸಿದ ಡ್ವೇನ್ ಬ್ರಾವೋ ಕೇವಲ 8 ಎಸೆತಗಳಲ್ಲಿ ಅಜೇಯ 20 ರನ್ಗಳಿಸಿ 189 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಲು ನೆರವಾದರು.
ರಾಜಸ್ಥಾನ್ ರಾಯಲ್ಸ್ ಪರ ಚೇತನ್ ಸಕಾರಿಯಾ 36ಕ್ಕೆ3, ಕ್ರಿಸ್ ಮೋರಿಸ್ 33ಕ್ಕೆ 2, ರಾಹುಲ್ ತೆವಾಟಿಯಾ 21ಕ್ಕೆ1 ಮತ್ತು ರೆಹಮಾನ್ 37ಕ್ಕೆ 1 ವಿಕೆಟ್ ಪಡೆದರು.