ಮುಂಬೈ:ಕೊರೊನಾ ಕಾರಣಕ್ಕೆ ಮುಂದೂಡಿಕೆಯಾದ ರಣಜಿ ಟ್ರೋಫಿ ಪಂದ್ಯಾವಳಿಗಳನ್ನು ಎರಡು ಹಂತಗಳಲ್ಲಿ ಆಡಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ.
ಮೊದಲ ಹಂತದಲ್ಲಿ ಎಲ್ಲ ಲೀಗ್ ಪಂದ್ಯಗಳನ್ನು ಆಡಿಸಲಾಗುತ್ತದೆ. ಎರಡನೇ ಹಂತದಲ್ಲಿ ನಾಕೌಟ್ ಪಂದ್ಯಗಳನ್ನು ಜೂನ್ನಲ್ಲಿ ಆಡಿಸಲಾಗುತ್ತದೆ ಎಂದು ಜಯ್ ಶಾ ಹೇಳಿದ್ದು, ಕೊರೊನಾ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಬಿಸಿಸಿಐ ಕೊರೊನಾದಿಂದ ಉಂಟಾಗುವ ಯಾವುದೇ ರೀತಿಯ ದುಷ್ಪರಿಣಾಮವನ್ನು ತಗ್ಗಿಸುವ ಪ್ರಯತ್ನ ಮಾಡುತ್ತಿದೆ ಎಂದ ಜಯ್ ಶಾ ರಣಜಿ ಟ್ರೋಫಿಯು ನಮ್ಮ ಅತ್ಯಂತ ಪ್ರತಿಷ್ಠಿತ ದೇಶೀಯ ಸ್ಪರ್ಧೆಯಾಗಿದ್ದು, ಟೀಂ ಇಂಡಿಯಾಗೆ ಪ್ರತಿಭೆಗಳನ್ನು ಒದಗಿಸಲು ಇದು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.