ಮುಂಬೈ: ಪ್ರಸ್ತುತ ಭಾರತ ತಂಡದ ಮುಖ್ಯ ಕೋಚ್ ಮತ್ತು 1983ರ ಏಕದಿನ ತಂಡದಲ್ಲಿದ್ದ ಮಾಜಿ ಕ್ರಿಕೆಟರ್ ರವಿ ಶಾಸ್ತ್ರಿ ಇಂದು 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರಿಗೆ ಭಾರತ ತಂಡದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ.
ಸ್ಪಿನ್ ಬೌಲರ್ ಆಗಿ 1981ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ನಂತರ ಬ್ಯಾಟಿಂಗ್ ಕೌಶಲ್ಯದಿಂದ ಆರಂಭಿಕ ಬ್ಯಾಟ್ಸ್ಮನ್ ಆಗಿ ಮೆರೆದಾಡಿದ್ದರು. ಶಾಸ್ತ್ರಿ 80 ಟೆಸ್ಟ್ ಮತ್ತು 150 ಏಕದಿನ ಪಂದ್ಯಗಳನ್ನಾಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 3,108 ರನ್ ಮತ್ತು 129 ವಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ 3,830 ರನ್ 151ವಿಕೆಟ್ ಪಡೆದಿದ್ದಾರೆ.
ರವಿ ಶಾಸ್ತ್ರಿಯವರು 2014ರಿಂದ 2016ರವರೆಗೆ ಭಾರತ ತಂಡದ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಮತ್ತೆ 2017ರಿಂದ ಇಲ್ಲಿಯವರೆಗೆ ಭಾರತ ತಂಡ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.