ಶಾರ್ಜಾ:ಸೋಮವಾರ ಶಾರ್ಜಾದಲ್ಲಿ ನಡೆಯಲಿರುವ 2021ರ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ. ಈ ಮಹತ್ವದ ಪಂದ್ಯಕ್ಕೆ ಸ್ಫೋಟಕ ಬ್ಯಾಟರ್ ಆ್ಯಂಡ್ರೆ ರಸೆಲ್ ಕಮ್ಬ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಆದರೆ, ಇದರ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.
ರಾಜಸ್ಥಾನ್ ರಾಯಲ್ಸ್ ಪಂದ್ಯದ ವೇಳೆ ಗಾಯಗೊಂಡಿದ್ದ ವಿಂಡೀಸ್ ಆಲ್ರೌಂಡರ್ ಫಿಟ್ನೆಸ್ ಟೆಸ್ಟ್ಗೆ ಒಳಗಾಗಿದ್ದರು, ಇಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಅವರು ಕಮ್ಬ್ಯಾಕ್ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ, ಅವರ ಫಿಟ್ನೆಸ್ ಬಗ್ಗೆ ಇನ್ನೂ ಫ್ರಾಂಚೈಸಿ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.
ಒಂದು ವೇಳೆ ಫಿಟ್ ಆಗಿದ್ದರೆ ಅವರು ಬಾಂಗ್ಲಾದೇಶದ ಆಲ್ರೌಂಡರ್ ಶಕಿಬ್ ಅಲ್ ಹಸನ್ ಬದಲಿಗೆ ತಂಡ ಸೇರಿಕೊಳ್ಳಲಿದ್ದಾರೆ. ಒಂದು ವೇಳೆ, ರಸೆಲ್ರ ಮೇಲೆ ಕೆಕೆಆರ್ ಮ್ಯಾನೇಜ್ಮೆಂಟ್ ಯಾವುದೇ ಒತ್ತಡ ಹೇರಲು ಬಯಸದಿದ್ದರೆ, ಈ ಪಂದ್ಯದಲ್ಲೂ ಶಕಿಬ್ ಅವರನ್ನು ಕಣಕ್ಕಿಳಿಸಬಹುದಾಗಿದೆ.