ಮುಂಬೈ: ಐಪಿಎಲ್ 15ನೇ ಅವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಗಿದೆ. 5 ಬಾರಿಯ ಚಾಂಪಿಯನ್ಸ್ ಆಡಿರುವ 5 ಪಂದ್ಯಗಳಲ್ಲೂ ಸೋಲು ಕಂಡರೂ ಕೂಡಾ ತಂಡದ ಸಂಯೋಜನೆಯಲ್ಲಿ ಎಡವುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ವಸೀಂ ಜಾಫರ್ ದುಬಾರಿ ಬೆಲೆ ತೆತ್ತು ಖರೀದಿಸಿದ ಟಿಮ್ ಡೇವಿಡ್ರನ್ನು ಬೆಂಚ್ ಕಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ.
ಸಿಂಗಾಪುರ್ನ ಆಲ್ರೌಂಡರ್ ಟಿಮ್ ಡೇವಿಡ್ ಸ್ಪೋಟಕ ಆಟಕ್ಕೆ ಹೆಸರಾದವರು. ಈಗಾಗಲೇ ಬಿಗ್ಬ್ಯಾಶ್, ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಅವರ ಆಟವನ್ನು ನೋಡಿದ್ದರಿಂದ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಭಾರಿ ಪೈಪೋಟಿ ನೀಡಿ 8.25 ಕೋಟಿ ರೂ ನೀಡಿ ಖರೀದಿಸಿತ್ತು.
ಆದರೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಕ್ರಮವಾಗಿ 12 ಮತ್ತು 1 ರನ್ಗಳಿಸಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಕ್ಕೆ ಅವರನ್ನು ಮುಂದಿನ ಮೂರು ಪಂದ್ಯಗಳಲ್ಲಿ ಬೆಂಚ್ ಕಾಯ್ದಿರಿಸಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಆತನಿಗೆ ಅವಕಾಶ ನೀಡಿದಿದ್ದಕ್ಕೆ ಮಾಜಿ ಕ್ರಿಕೆಟಿಗ ವಸೀಂ ಜಾಫರ್ ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.