ಪರ್ತ: (ಆಸ್ಟ್ರೇಲಿಯಾ):ಎದೆನೋವು ಕಾರಣದಿಂದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಸ್ಪತ್ರೆ ದಾಖಲಾಗಿದ್ದಾರೆ. ಇಲ್ಲಿಯ ಪರ್ತ್ ಆಸ್ಪತ್ರೆಯಲ್ಲಿ ಅವರು ದಾಖಲಾಗಿದ್ದು ವೈದ್ಯರು ತಪಾಸಣೆ ನಡೆಸಿದ್ದಾರೆ. ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್‌ನ ಮೂರನೇ ದಿನದ ಕಾಮೆಂಟ್ ಮಾಡುತ್ತಿದ್ದಾಗ ಎದುನೋವು ಕಾಣಿಸಿಕೊಂಡಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆತರಲಾಗಿದೆ.
ಚಾನೆಲ್ 7 ಜೊತೆ ಅವರು ಕಾಮೆಂಟೇಟರ್ ಆಗಿ ಒಪ್ಪಂದ ಮಾಡಿಕೊಂಡಿದ್ದು ಊಟದ ವೇಳೆ ಎದೆನೋವು ಕಾಣಿಸಿಕೊಂಡಿತು. ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಕಾಮೆಂಟರಿ ಸಹೋದ್ಯೋಗಿಗಳಿಗೆ ತಾವು ಆರೋಗ್ಯವಾಗಿರುವುದಾಗಿ ರಿಕಿ ಪಾಂಟಿಂಗ್ ತಿಳಿಸಿದ್ದಾರೆ ಎಂದು ಫಾಕ್ಸ್ ಸ್ಪೋರ್ಟ್ಸ್‌ನ ವರದಿ ಮಾಡಿದೆ.