ಡೆಹ್ರಾಡೂನ್/ಮುಂಬೈ:ಕಾರು ಅಪಘಾತದಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉತ್ತರಾಖಂಡದ ಡೆಹ್ರಾಡೂನ್ನಿಂದ ಮುಂಬೈಗೆ ಸ್ಥಳಾಂತರ ಮಾಡಲಾಗಿದೆ. ಇದುವರೆಗೆ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಿಷಭ್ ಪಂತ್ ಇಂದು ಮುಂಬೈಗೆ ಏರ್ಲಿಫ್ಟ್ ಮಾಡಲಾಯಿತು.
ಡಿ.30ರಂದು ದೆಹಲಿ ಮತ್ತು ಡೆಹ್ರಾಡೂನ್ ಹೆದ್ದಾರಿಯಲ್ಲಿ ರಿಷಭ್ ಪಂತ್ ಕಾರು ಅಪಘಾತಕ್ಕೀಡಾಗಿತ್ತು. ಅಂದಿನಿಂದ 6 ದಿನಗಳ ಕಾಲ ಡೆಹ್ರಾಡೂನ್‌ನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಿಂದ ರಿಷಭ್ ಪಂತ್ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಜಾಲಿಗ್ರಾಂಟ್ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು.
ಇದನ್ನೂ ಓದಿ:ಪಂತ್ ಪ್ರಾಣ ರಕ್ಷಿಸಿದ ಬಸ್ ಚಾಲಕ, ನಿರ್ವಾಹಕನನ್ನು ಗೌರವಿಸಲಿದೆ ಉತ್ತರಾಖಂಡ್ ಸರ್ಕಾರ
ಜಾಲಿಗ್ರಾಂಟ್ ವಿಮಾನ ನಿಲ್ದಾಣದಿಂದ ರಿಷಭ್ ಪಂತ್ ಅವರನ್ನು ವಿಮಾನದಲ್ಲಿ ಮುಂಬೈಗೆ ಶಿಫ್ಟ್ ಮಾಡಲಾಯಿತು. ರಿಷಭ್ ಪಂತ್ ಜೊತೆಗೆ ಅವರ ಕುಟುಂಬ ಸದಸ್ಯರು ಮುಂಬೈಗೆ ವಿಮಾನದಲ್ಲಿ ಬಂದರು. ಇದಕ್ಕೂ ಮುನ್ನ ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್, ರಿಷಭ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿತ್ತು.
ಮುಂಬೈನ ಅಂಬಾನಿ ಆಸ್ಪತ್ರೆಗೆ ದಾಖಲು: ಜಾಲಿಗ್ರಾಂಟ್ ವಿಮಾನ ನಿಲ್ದಾಣದಿಂದ ಮುಂಬೈಗೆ ಏರ್ಶಿಫ್ಟ್ ಮಾಡಿದ ರಿಷಭ್ ಪಂತ್ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ. ಇಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ನಿರ್ದೇಶಕ, ಆರ್ತ್ರೋಸ್ಕೊಪಿ ಮತ್ತು ಭುಜದ ತಜ್ಞ ಡಾ.ದಿನ್‌ಶಾ ಪರ್ದಿವಾಲಾ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.