ಬೆಂಗಳೂರು: ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಭಾರತದ ಸೀಮಿತ ಓವರ್ಗಳ ನಾಯಕ ರೋಹಿತ್ ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈ ವೇಳೆ ಅಂಡರ್-19 ತಂಡದ ಆಟಗಾರರಿಗೆ ಉಪಯುಕ್ತ ಮಾಹಿತಿ ನೀಡಿದ್ದಾರೆ.
ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಬೆಂಗಳೂರಿನ ಎನ್ಸಿಎಯಲ್ಲಿ ಚೇತರಿಸಿಕೊಳ್ಳುತ್ತಿರುವ ನಿಗದಿತ ಓವರ್ಗಳ ಕಪ್ತಾನ ರೋಹಿತ್ ಶರ್ಮಾ ಭಾರತದ ಕಿರಿಯರ ತಂಡದೊಂದಿಗೆ ಕೆಲ ಸಮಯ ಕಳೆದಿದ್ದಾರೆ. ಇದರ ಫೋಟೋಗಳನ್ನ ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಟ್ವಿಟರ್ ಅಕೌಂಟ್ನಲ್ಲಿ ಹಾಕಿಕೊಂಡಿದೆ.
ಇದನ್ನೂ ಓದಿರಿ:75ನೇ ಸ್ವಾತಂತ್ರ್ಯೋತ್ಸವ; ದೆಹಲಿಯ ಚಾಂದಿನಿ ಚೌಕ್ ದೇಶದ ಸಾಂಸ್ಕೃತಿಕ ಪರಂಪರೆಯ ಪ್ರತೀಕ
ಡಿಸೆಂಬರ್ 23ರಿಂದ ಅಂಡರ್-19 ಏಷ್ಯಾ ಕಪ್ ಹಾಗೂ ಜನವರಿ 14ರಿಂದ ಆರಂಭಗೊಳ್ಳಲಿರುವ ಐಸಿಸಿ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಭಾಗಿಯಾಗಲಿದೆ. ಅದಕ್ಕಾಗಿ ಎನ್ಸಿಎ ಕ್ರೀಡಾಂಗಣದಲ್ಲಿ ಪೂರ್ವ ಸಿದ್ಧತಾ ಶಿಬಿರದಲ್ಲಿ ತರಬೇತಿ ಪಡೆದುಕೊಳ್ಳುತ್ತಿದೆ. ತಂಡವನ್ನ ಯಶ್ ಧುಲ್ ಮುನ್ನಡೆಸುತ್ತಿದ್ದು, ಇದೀಗ ಯುವ ಪ್ಲೇಯರ್ಸ್ಗೆ ರೋಹಿತ್ರಿಂದ ಕೆಲವೊಂದು ಉಪಯುಕ್ತ ಮಾಹಿತಿ ಸಿಕ್ಕಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 26ರಿಂದ ಟೆಸ್ಟ್ ಸರಣಿ ಆರಂಭಗೊಳ್ಳಲಿದ್ದು, ನಂತರ ಜನವರಿ ತಿಂಗಳಲ್ಲಿ ಏಕದಿನ ಪಂದ್ಯಗಳು ಆರಂಭಗೊಳ್ಳಲಿವೆ. ಈ ವೇಳೆಗೆ ರೋಹಿತ್ ಶರ್ಮಾ ಹರಿಣಗಳ ನಾಡಿಗೆ ಪ್ರವಾಸ ಬೆಳೆಸಿ ತಂಡ ಸೇರಿಕೊಳ್ಳಲಿದ್ದಾರೆ.