ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಟೆಸ್ಟ್ ತಂಡದ ಇತರೆ ಸದಸ್ಯರು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಅಭ್ಯಾಸ ಶುರು ಮಾಡಿದ್ದಾರೆ. ಬಿಸಿಸಿಐ ಆಟಗಾರರ ಪೂರ್ವಾಭ್ಯಾಸದ ಫೋಟೋಗಳನ್ನು ಹಂಚಿಕೊಂಡಿದೆ. ಜೂನ್ 1 ರಿಂದ 5 ರವರೆಗೆ ಟೆಸ್ಟ್ ನಡೆಯಲಿದೆ. ಇಂಗ್ಲೆಂಡ್ ವಿರುದ್ಧ ಜೂನ್ 1 ರಿಂದ ಆರಂಭವಾಗುವ ಮರುನಿಗದಿಯಾದ ಏಕೈಕ ಟೆಸ್ಟ್ಗಾಗಿ ಭಾರತ ತಂಡ ಅಭ್ಯಾಸ ಆರಂಭಿಸಿದೆ.
ಲೈಸೆಸ್ಟರ್‌ಶೈರ್ ಕ್ರಿಕೆಟ್ ಕ್ಲಬ್‌ನಲ್ಲಿ ಭಾರತದ ಟೆಸ್ಟ್ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ. ಟೆಸ್ಟ್ ಪಂದ್ಯ ಜೂನ್ 1 ರಿಂದ 5 ರವರೆಗೆ ನಡೆಯಲಿದ್ದು, ಅದಕ್ಕಾಗಿ ವಾರದ ಮುಂಚೆಯೇ ಪೂರ್ವಾಭ್ಯಾಸ ಆರಂಭಿಸಲಾಗಿದೆ.
2021 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೂ ಮುನ್ನ ಭಾರತ ತಂಡದ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಪಂದ್ಯವನ್ನು ಮುಂದೂಡಲಾಗಿತ್ತು. ಇದೀಗ ಪಂದ್ಯವನ್ನು ಮರುನಿಗದಿ ಮಾಡಲಾಗಿದೆ. ಇನ್ನು ಸರಣಿಯಲ್ಲಿ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿದೆ.