ಮುಂಬೈ: ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಭಾರತ ತಂಡದ ನಾಯಕನ್ನನಾಗಿ ನೇಮಕ ಮಾಡಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋತ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು. ಇದೀಗ ರೋಹಿತ್ ಶರ್ಮಾ ಅವರನ್ನು ಖಾಯಂ ಟೆಸ್ಟ್ ತಂಡದ ನಾಯಕನನ್ನಾಗಿ ನೇಮಕ ಮಾಡಿರುವುದಾಗಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 1ರಿಂದ ಟೆಸ್ಟ್ ಸರಣಿ ನಡೆಯಲಿದ್ದು, ರೋಹಿತ್ ಶರ್ಮಾ ಖಾಯಂ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರೋಹಿತ್ರನ್ನು ಉಪನಾಯಕನನ್ನಾಗಿ ನೇಮಕ ಮಾಡಲಾಗಿತ್ತಾದರೂ, ಗಾಯದ ಕಾರಣ ರೋಹಿತ್ ಸಂಪೂರ್ಣ ಪ್ರವಾಸವನ್ನು ಕಳೆದುಕೊಂಡಿದ್ದರು.
ರೋಹಿತ್ ಶರ್ಮಾ ದೇಶದ ನಂಬರ್ ಕ್ರಿಕೆಟರ್. ಅವರು ಅದ್ಭುತ ಕ್ರಿಕೆಟರ್ ಆಗಿದ್ದು, ಎಷ್ಟು ಸಮಯದ ವರೆಗೂ ಫಿಟ್ ಆಗಿ, ಟೆಸ್ಟ್ ಕ್ರಿಕೆಟ್ ಆಡುತ್ತಾರೋ, ಅಲ್ಲಿಯವರೆಗೆ ಅವರು ನಾಯಕನಾಗಿರುತ್ತಾರೆ. ಇವರ ನಾಯಕತ್ವದಡಿಯಲ್ಲಿ ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ಬುಮ್ರಾರನ್ನು ಭವಿಷ್ಯದ ನಾಯಕರನ್ನಾಗಿ ಬೆಳೆಸಬಹುದು ಎಂದು ಚೇತನ್ ಶರ್ಮಾ ತಿಳಿಸಿದ್ದಾರೆ.
ಶ್ರೀಲಂಕಾ ಸರಣಿಗೆ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭ್ಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ)
ಇದನ್ನೂ ಓದಿ:ರಣಜಿಯಲ್ಲಿ ಟಿ20 ಆಟ : 148 ಎಸೆತಗಳಲ್ಲಿ 194 ರನ್ ಚಚ್ಚಿದ ಶಾರುಖ್ ಖಾನ್