ಬಾಂಗ್ಲಾದೇಶ ಹಾಗೂ ಭಾರತ ಕ್ರಿಕೆಟ್ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಗಾಯಾಳು ನಾಯಕ ರೋಹಿತ್ ಶರ್ಮಾ ಹೊರಬಿದ್ದಿದ್ದಾರೆ. ಸರಣಿಯಲ್ಲಿ ಇತರ ಕೆಲ ಗಾಯಾಳುಗಳ ಬದಲಿಗೆ ಬೇರೆ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಬಿಸಿಸಿಐ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ. ರೋಹಿತ್ ಶರ್ಮಾ ಹೆಬ್ಬೆರಳಿನ ಗಾಯದಿಂದ ತವರಿಗೆ ಮರಳಿರುವ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ನಾಯಕತ್ವವು ಕೆಎಲ್ ರಾಹುಲ್ ಹೆಗಲಿಗೇರಿದ್ದು, ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಅಲ್ಲದೆ, ಗಾಯಗೊಂಡಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ವೇಗಿ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ತಂಡ ಸೇರಿಕೊಳ್ಳಲಿದ್ದಾರೆ.