ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇವೆ. ಈ ಬೆನ್ನಲ್ಲೇ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.
'ಶನಿವಾರ ನಡೆಸಿದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ನಲ್ಲಿ ಅವರಿಗೆ ಕೋವಿಡ್ ದೃಢಪಟ್ಟಿದೆ. ಪ್ರಸ್ತುತ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಆಗಿದ್ದು, BCCI ವೈದ್ಯಕೀಯ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದೆ' ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 5ನೇ ಪಂದ್ಯವನ್ನು ಭಾರತ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಆಡಲು ಸಿದ್ಧತೆ ನಡೆಸುತ್ತಿದೆ. ಜುಲೈ 1ರಂದು ಪಂದ್ಯ ಆರಂಭವಾಗಲಿದೆ. ಕಳೆದ ವರ್ಷ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಇದಾಗಿದ್ದು, ಕೊರೊನಾ ವೈರಸ್ ಕಾರಣಕ್ಕೆ ಸರಣಿ ಮುಂದೂಡಲಾಗಿತ್ತು. ಭಾರತ ಸರಣಿಯಲ್ಲಿ 2-1ರ ಮುನ್ನಡೆಯಲ್ಲಿದೆ.
ಇದನ್ನೂ ಓದಿ:ರಣಜಿ ಟ್ರೋಫಿ ಫೈನಲ್-4ನೇ ದಿನ: ಸಂಕಷ್ಟದಲ್ಲಿ ಮುಂಬೈ.. ಮಧ್ಯಪ್ರದೇಶಕ್ಕೆ 'ಮುನ್ನಡೆ' ಚಾಂಪಿಯನ್ ಗುರಿ