ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನವೇ ಅವರು ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಿದ್ದರು ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಚೇರಿ ಈ ಮಾಹಿತಿ ನೀಡಿದೆ.
ನವೆಂಬರ್ 2022ರಲ್ಲಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೋತ ನಂತರ, ರೋಹಿತ್ ಟಿ20 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಅಂದಿನಿಂದ ಪಾಂಡ್ಯ ತಂಡ ಮುನ್ನಡೆಸುತ್ತಿದ್ದಾರೆ. ರೋಹಿತ್ 148 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 140 ಸ್ಟ್ರೈಕ್ ರೇಟ್‌ನಲ್ಲಿ ನಾಲ್ಕು ಶತಕಗಳೊಂದಿಗೆ 3,853 ರನ್ ಗಳಿಸಿದ್ದಾರೆ.
ಬಿಸಿಸಿಐ ಮೂಲಗಳಂತೆ, ಇದು ಹೊಸ ವಿಷಯವಲ್ಲ. ರೋಹಿತ್ ಕಳೆದ ಒಂದು ವರ್ಷದಿಂದ ಯಾವುದೇ ಟಿ20 ಅಂತರರಾಷ್ಟ್ರೀಯ ಪಂದ್ಯ ಆಡಿಲ್ಲ. ಅವರ ಗಮನವೆಲ್ಲ ವಿಶ್ವಕಪ್ ಮೇಲಿತ್ತು. ಈ ಕುರಿತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಟಿ20ಯಿಂದ ದೂರ ಉಳಿಯುವ ಇಚ್ಛೆಯನ್ನು ಶರ್ಮಾ ವ್ಯಕ್ತಪಡಿಸಿದ್ದರು.
ರೋಹಿತ್ ಹೊರತುಪಡಿಸಿ ಭಾರತ ನಾಲ್ಕು ಉದಯೋನ್ಮುಖ ಆಟಗಾರರನ್ನು ಹೊಂದಿದೆ. ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಮತ್ತು ರಿತುರಾಜ್ ಗಾಯಕ್ವಾಡ್ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.