ದುಬೈ:2ನೇ ಹಂತದ ಐಪಿಎಲ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ ಯುಎಇ ತಲುಪಿದೆ.
ಆರ್ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ದೇವದತ್ ಪಡಿಕ್ಕಲ್, ಸಚಿನ್ ಬೇಬಿ, ಮೊಹಮ್ಮದ್ ಅಜರುದ್ದೀನ್, ಯುಜ್ವೇಂದ್ರ ಚಹಲ್ ಸೇರಿದಂತೆ ಆರ್ಸಿಬಿ ಬಳಗ ಬೆಂಗಳೂರಿನಿಂದ ದುಬೈ ಪ್ರಯಾಣ ಬೆಳೆಸಿತ್ತು. ಇದೀಗ ದುಬೈ ತಲುಪಿರುವ ಆರ್ಸಿಬಿ ಬಳಗ, ತರಬೇತಿ ಆರಂಭಿಸುವ ಮುನ್ನ ದುಬೈನಲ್ಲಿ 6 ದಿನಗಳ ಕಾಲ ಕ್ವಾರಂಟೈನ್ಗೆ ಒಳಗಾಗಲಿದೆ.
ಬೆಂಗಳೂರು ತಂಡ ಸೆಪ್ಟೆಂಬರ್ 20ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ದ್ವಿತೀಯ ಹಂತದ ಲೀಗ್ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.