ನವದೆಹಲಿ/ಬೆಂಗಳೂರು:ಜಗತ್ತು ಕಂಡ ಅಪರೂಪದ ಕ್ರಿಕೆಟ್ ತಾರೆ, ಟೀಂ ಇಂಡಿಯಾ ಮಾಜಿ ಆಟಗಾರ ಲಿಟಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕಸ್ಮಿಕವಾಗಿ ಭೇಟಿಯಾದರು.
ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರ ಅಧ್ಯಕ್ಷತೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ರಾಜ್ಯಕ್ಕೆ ಮರಳುವ ವೇಳೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಇಂದು (ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿನ್ ತೆಂಡೂಲ್ಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿ ಕುಶಲೋಪಹರಿ ವಿಚಾರಿಸಿ ಕೆಲ ಹೊತ್ತು ಮಾತುಕತೆಯಲ್ಲಿ ತೊಡಗಿದರು.