ಹೈದರಾಬಾದ್: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ಅವರು ರಾಷ್ಟ್ರೀಯ ತಂಡದ ಕಳಪೆ ಪ್ರದರ್ಶನದ ಬಗ್ಗೆ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ. ಇತ್ತೀಚೆಗೆ ಲಂಕಾ ತಂಡ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದರ ಬಗೆಗೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಆಂಗ್ಲ ಪಡೆ ಲಂಕಾ ತಂಡವನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತ್ತು. ಈ ಪಂದ್ಯಗಳಲ್ಲಿ ಲಂಕಾ ತಂಡ 130 ರನ್‌ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಇದು ಜಯಸೂರ್ಯ ಕೋಪಕ್ಕೆ ಗುರಿಯಾಗಿದೆ.