ದುಬೈ :ಭಾರತದ ಸ್ಫೋಟಕ ಆರಂಭಿಕ ಬ್ಯಾಟರ್ ಶೆಫಾಲಿ ವರ್ಮಾ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಟಿ20 ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಗಾಯದ ಕಾರಣ ತಂಡದಿಂದ ಹೊರ ಬಿದ್ದಿದ್ದ ಆಸ್ಟ್ರೇಲಿಯಾದ ಬೆತ್ ಮೂನಿ 2ನೇ ಸ್ಥಾನಕ್ಕೆ ಕುಸಿದಿದ್ದರಿಂದ ಶೆಫಾಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಆದರೆ, ಅವರ ಜೊತೆಗಾರ್ತಿ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದ ಸ್ಮೃತಿ ಮಂಧಾನ ಒಂದು ಸ್ಥಾನ ಕುಸಿದು 4ನೇ ಸ್ಥಾನ ಪಡೆದಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಆಸ್ಟ್ರೇಲಿಯಾದ ಬೆತ್ ಮೂನಿ ಮತ್ತು ನಾಯಕಿ ಮೆಗ್ ಲ್ಯಾನಿಂಗ್ 2 ಮತ್ತು 3ನೇ ಸ್ಥಾನ ಪಡೆದಿದ್ದಾರೆ. ಆಸೀಸ್ ವಿಕೆಟ್ ಕೀಪರ್ ಅಲಿಸ್ ಹೀಲಿ 6ನೇ ಸ್ಥಾನದಲ್ಲಿದ್ದಾರೆ. ಇತ್ತೀಚೆಗೆ ಕಾಮನ್ವೆಲ್ತ್ ಗೇಮ್ಸ್ ಕ್ವಾಲಿಫೈಯರ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಶ್ರೀಲಂಕಾದ ಚಾಮರಿ ಅಟಪಟ್ಟು 6 ಸ್ಥಾನ ಮೇಲೇರಿ 8ನೇ ಸ್ಥಾನ ಪಡೆದಿದ್ದಾರೆ.
ನ್ಯೂಜಿಲ್ಯಾಂಡ್ನ ಸೋಫೀ ಡಿವೈನ್ ಮತ್ತು ಸೂಜಿ ಬೇಟ್ಸ್ 5 ಮತ್ತು 7ನೇ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಶ್ರೇಯಾಂಕದಲ್ಲಿ ಭಾರತದ ದೀಪ್ತಿ ಶರ್ಮಾ 3ನೇ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಕಿವೀಸ್ ನಾಯಕಿ ಸೋಫಿ ಡಿವೈನ್ ಮತ್ತು ಇಂಗ್ಲೆಂಡ್ನ ನ್ಯಾಟ್ ಸೀವರ್ 2ನೇ ಶ್ರೇಯಾಂಕದಲ್ಲಿದ್ದಾರೆ.
ಇದನ್ನೂ ಓದಿ:2019ರ ವಿಶ್ವಕಪ್ ನಂತರ ಕುಲ್ದೀಪ್-ಚಹಲ್ ಬೌಲಿಂಗ್ ಕ್ಷೀಣಿಸಿದೆ.. ಕಾರಣ ಧೋನಿ ಮೈದಾನದಲ್ಲಿಲ್ಲ ಎಂದ ಮಾಜಿ ಕ್ರಿಕೆಟಿಗ