ಮುಂಬೈ:ಆಗಸ್ಟ್ 18ರಿಂದ ಜಿಂಬಾಬ್ವೆ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳಿಗೆ ಈಗಾಗಲೇ ಟೀಂ ಇಂಡಿಯಾ ಪ್ರಕಟಗೊಂಡಿದೆ. ಆದರೆ, ಗಾಯಗೊಂಡಿರುವ ಕಾರಣ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಮಂಡಳಿಯು(ಬಿಸಿಸಿಐ) ಮತ್ತೋರ್ವ ಸ್ಟಾರ್ ಪ್ಲೇಯರ್ಗೆ ಮಣೆ ಹಾಕಿದೆ.
ಆರ್ಸಿಬಿ ತಂಡದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಗಮನ ಸೆಳೆದಿರುವ ಶಹ್ಬಾಜ್ ಅಹ್ಮದ್ ಅವರನ್ನು ಆಯ್ಕೆ ಸಮಿತಿ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ ಇವರು ಭಾರತೀಯ ಕ್ರಿಕೆಟ್ ತಂಡದಲ್ಲಿ ಇದೇ ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆಗಸ್ಟ್ 18 ರಿಂದ ಹರಾರೆ ಮೈದಾನದಲ್ಲಿ ಭಾರತ-ಜಿಂಬಾಬ್ವೆ ಮಧ್ಯೆ ಮೊದಲ ಏಕದಿನ ಪಂದ್ಯ ನಿಗದಿಯಾಗಿದೆ. ಟೀಂ ಇಂಡಿಯಾವನ್ನು ಕೆ ಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯ ನಿರ್ವಹಿಸುವರು.