ಲಂಡನ್:ಟೀಂ ಇಂಡಿಯಾ ಕ್ರಿಕೆಟ್ನ ಮುಖ್ಯ ಕೋಚ್ ರವಿಶಾಸ್ತ್ರಿ ಸೇರಿದಂತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ಈಗಾಗಲೇ ದೃಢಪಟ್ಟಿದೆ. ಇದೀಗ ಆರ್ಟಿ-ಪಿಸಿಆರ್ ವೈದ್ಯಕೀಯ ಪರೀಕ್ಷೆಯಲ್ಲೂ ಪಾಸಿಟಿವ್ ರಿಪೋರ್ಟ್ ಬಂದಿದೆ. ಹೀಗಾಗಿ ಮುಂದಿನ 10 ದಿನಗಳ ಕಾಲ ಅವರು ಐಸೋಲೇಷನ್‌ನಲ್ಲಿ ಇರುತ್ತಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಹೀಗಾಗಿ, ಮ್ಯಾಂಚೆಸ್ಟರ್ನಲ್ಲಿ ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಿಂದ ಅವರು ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಈ ಟೆಸ್ಟ್ ಪಂದ್ಯ ಸೆಪ್ಟೆಂಬರ್ 10ರಿಂದ ಆರಂಭಗೊಳ್ಳಲಿದೆ. ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಹಾಗೂ ಫಿಸಿಯೋ ನಿತಿನ್ ಪಟೇಲ್ ಅವರಿಗೆ ಕೊರೊನಾ ಇರುವುದು ನಿನ್ನೆ ದೃಢಪಟ್ಟಿತ್ತು. ಹೀಗಾಗಿ ತಕ್ಷಣವೇ ಅವರನ್ನು ಕ್ವಾರಂಟೈನ್ಗೊಳಪಡಿಸಲಾಗಿತ್ತು. ಇದಾದ ನಂತರ ಅವರಿಗೆ ಮಾಡಿಸಲಾಗಿರುವ ಆರ್ಟಿ-ಪಿಸಿಆರ್ ಟೆಸ್ಟ್ನ ರಿಪೋರ್ಟ್ ಇದೀಗ ಬಂದಿದ್ದು, ಪಾಸಿಟಿವ್ ಖಾತ್ರಿಯಾಗಿದೆ.
ಇದನ್ನೂ ಓದಿ: ಐಸಿಸಿ ಟಿ-20 ವಿಶ್ವಕಪ್ ಹಾಗೂ ನ್ಯೂಜಿಲ್ಯಾಂಡ್ ಸರಣಿಗೆ ಪಾಕ್ ತಂಡ ಪ್ರಕಟ