ಮುಂಬೈ(ಮಹಾರಾಷ್ಟ್ರ): ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನಿಂದಾಗಿ ಶುಕ್ರವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಬುಧವಾರ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅಯ್ಯರ್ ಅವರನ್ನು ಏಕದಿನ ಪಂದ್ಯಗಳಿಂದ ಹೊರಗಿಡಲಾಗಿದೆ ಎಂದು ಮಾರ್ಚ್ 11 ರಂದು ಮೊದಲು ವರದಿಯಾಗಿತ್ತು.
ಈ ಸ್ಟೈಲಿಶ್ ಮುಂಬೈಕರ್ ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ. ಅಯ್ಯರ್ IPL ನಲ್ಲಿ KKR ಅನ್ನು ಮುನ್ನಡೆಸುತ್ತಿದ್ದಾರೆ. ಅವರು ಪ್ರಸ್ತುತ ವೈದ್ಯಕೀಯ ನೆರವು ಪಡೆಯಲು NCAಗೆ ಮರಳಿದ್ದಾರೆ. ಆದರೆ, ಅವರಿಗೆ ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಅವರಂತೆ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೇ ಎಂಬ ಬಗ್ಗೆ ತಿಳಿದುಬಂದಿಲ್ಲ. "ಗಾಯಗಳು ಆಟದ ಒಂದು ಭಾಗವಾಗಿದೆ. ನಾವು ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದೇವೆ ಮತ್ತು ಅವರು ಸುಸಜ್ಜಿತರಾಗಿದ್ದಾರೆ. ನಾವು NCA ಯೊಂದಿಗೆ ಸಮನ್ವಯದಲ್ಲಿದ್ದೇವೆ. ಶ್ರೇಯಸ್ ಈ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದ ಅಯ್ಯರ್:ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಸರಣಿಯ ಸಮಯದಲ್ಲಿ ಭಾರತ ತಂಡಕ್ಕೆ ಮರಳಿದ್ದ ಬಲಗೈ ಬ್ಯಾಟ್ಸ್‌ಮನ್ ಅಯ್ಯರ್, ಅಹಮದಾಬಾದ್‌ನಲ್ಲಿ ನಡೆದಿದ್ದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದರು ಎಂದು ವರದಿಯಾಗಿತ್ತು. ಇದರ ಪರಿಣಾಮವಾಗಿ, ಅಯ್ಯರ್ ಅವರನ್ನು ಬಿಸಿಸಿಐನ ವೈದ್ಯಕೀಯ ತಂಡವು ಸ್ಕ್ಯಾನಿಂಗೆ ಒಳಪಡಿಸಿತ್ತು. ಈ ಮೂಲಕ ಬ್ಯಾಟ್ಸ್‌ಮನ್ ಮೇಲೆ ನಿಗಾ ಇರಿಸಲಾಗಿದೆ ಎಂಬ ಸಂದೇಶವನ್ನು ರವಾನಿಸಿತ್ತು.