ನವದೆಹಲಿ:ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಇತ್ತೀಚಿನ ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತದ ಶುಭ್‌ಮನ್ ಗಿಲ್ ಒಂದು ಸ್ಥಾನ ಜಿಗಿದಿದ್ದಾರೆ. ಅಗ್ರ ಮೊದಲ ಐದು ಸ್ಥಾನದೊಳಗೆ ಶ್ರೆಯಾಂಕ ಗಳಿಸಿದ್ದಾರೆ. ಶುಭಮನ್ ಗಿಲ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಅಗ್ರ ಎರಡು ಸ್ಥಾನಗಳಲ್ಲಿ ಇಬ್ಬರು ಪಾಕಿಸ್ತಾನಿ ಬ್ಯಾಟ್ಸ್‌ಮನ್‌ಗಳು ಇದ್ದಾರೆ. ಮೊದಲ ಸ್ಥಾನದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಇದ್ದರೆ, ಎರಡನೇ ಸ್ಥಾನದಲ್ಲಿ ಪಾಕ್ ಕ್ರಿಕೆಟಿಗ ಫಖರ್ ಜಮಾನ್ ಸ್ಥಾನ ಪಡೆದಿದ್ದಾರೆ. ಫಖರ್ 8 ಅಂಕಗಳನ್ನು ಗಳಿಸಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು-ಪೊಲೀಸರ ಮಧ್ಯೆ ಸಂಘರ್ಷ: ಇಬ್ಬರಿಗೆ ಗಾಯ
ಏಳನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ:ಫಖರ್ ಅವರು 8 ಪಾಯಿಂಟ್ ಗಳಿಸಿದ್ದರಿಂದ ಒಬ್ಬ ಬ್ಯಾಟ್ಸ್‌ಮನ್ ತನ್ನ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಫಖರ್ಗೂ ಮುನ್ನ ಎರಡನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ರಾಸಿ ವಾನ್ ದಾರ್ ಡುಸೆನ್ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಸದ್ಯ ಅವರು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಒಂದು ಸ್ಥಾನ ಪಡೆದು ನಾಲ್ಕನೇ ಶ್ರೇಯಾಂಕದಲ್ಲಿದ್ದಾರೆ. ಇನ್ನು ಪಾಕಿಸ್ತಾನದ ಇಮಾಮ್ ಉಲ್ ಹಕ್ ಐದನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೆವಿಡ್ ವಾರ್ನರ್ ಆರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಎಂಟನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಒಂಬತ್ತನೇ ಶ್ರೇಯಾಂಕದಲ್ಲಿದ್ದಾರೆ ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 10ನೇ ಸ್ಥಾನದಲ್ಲಿದ್ದಾರೆ.