ನವದೆಹಲಿ:ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಈ ಸೋಲು ಭಾರತ ತಂಡದಲ್ಲಿ ಪ್ರಮುಖ ಪರಿವರ್ತನೆಗೆ ಕಾರಣವಾಗಬಹುದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಒಂದು ಮೂಲಗಳ ಪ್ರಕಾರ, ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ ಮತ್ತು ರವಿಚಂದ್ರನ್ ಅಶ್ವಿನ್ ಹೊಡಿ - ಬಡಿ ಪಂದ್ಯಗಳಿಂದ ವಿಮುಖರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಮುಂದಿನ ಟಿ20 ವಿಶ್ವಕಪ್‌ಗೆ ಇನ್ನೂ ಎರಡು ವರ್ಷ ಬಾಕಿ ಇದ್ದು, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಹೊಸ ತಂಡವನ್ನು ಆಯ್ಕೆ ಮಾಡುವ ಲಕ್ಷಣಗಳು ಹೆಚ್ಚಾಗಿವೆ ಎಂಬ ಸುದ್ದಿ ಹೊರ ಬಿದ್ದಿದೆ. ತಂಡದ ಸೋಲಿನ ಬಳಿಕ ಮಾತನಾಡಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಸದ್ಯದಲ್ಲಿಯೇ ಪ್ರಸ್ತುತ ತಂಡದಿಂದ ಕೆಲವು ನಿವೃತ್ತಿಗಳು ಘೋಷಣೆ ಆಗಹುದು ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.