ಕರ್ನಾಟಕ

karnataka

ETV Bharat / sports

IND vs SA 1st T20; ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡ - ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಸರಣಿ

ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ಆತಿಥೇಯ ಭಾರತ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ನೀಡಿದ್ದಾರೆ.

IND vs SA
IND vs SA

By

Published : Jun 9, 2022, 7:15 PM IST

ದೆಹಲಿ:ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಸರಣಿಗೆ ಗ್ರೀನ್​ ಸಿಗ್ನಲ್​ ಸಿಕ್ಕಿದೆ. ಟಾಸ್ ಗೆದ್ದ ಎದುರಾಳಿ ತಂಡ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಅತಿಥೇಯ ಭಾರತ ತಂಡ ಬ್ಯಾಟಿಂಗ್​ ಮಾಡುತ್ತಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11:ಇಶಾನ್ ಕಿಶನ್, ರುತುರಾಜ್​ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್ ಅವೇಶ್ ಖಾನ್

ಸೌತ್ ಆಫ್ರಿಕಾ ಪ್ಲೇಯಿಂಗ್ 11:ಕ್ವಿಂಟನ್ ಡಿಕಾಕ್, ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ತ್ರಿಸ್ಟಾನ್ ಸ್ಟಬ್ಸ್, ವೆಯ್ನ್ ಪಾರ್ನೆಲ್, ಡ್ವೇನ್ ಪ್ರೆಟೋರಿಯಸ್, ಕೇಶವ್ ಮಹಾರಾಜ್, ತಬ್ರೈಜ್ ಶಂಸಿ, ಕಾಗಿಸೋ ರಬಾಡಾ, ಆನ್ರಿತ್ ನೋರ್ಜೆ

ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಕೈಗೊಂಡಿದ್ದು, 5 ಪಂದ್ಯಗಳ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ ವಿರುದ್ಧ ಸೆಣಸಾಡಲಿದೆ. ಈ ಸರಣಿಯ ಪ್ರಥಮ ಟಿ 20 ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ABOUT THE AUTHOR

...view details