ಬೆಂಗಳೂರು:ಉಭಯ ತಂಡಗಳಿಗೂ ಫೈನಲ್ ಪಂದ್ಯವಾಗಿರುವ 5ನೇ ಟಿ-20 ಯಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಗಾಯಗೊಂಡ ತೆಂಬ ಬವುಮಾ ಬದಲಾಗಿ ಈ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿರುವ ಸ್ಪಿನ್ನರ್ ಕೇಶವ್ ಮಹಾರಾಜ್ ಕೂಡ ಐದನೇ ಪಂದ್ಯದಲ್ಲೂ ಟಾಸ್ ಗೆದ್ದು ಫೀಲ್ಡಿಂಗ್ ಪಡೆದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೆ ಫೈನಲ್ ಕದನವಾಗಿದೆ. 5 ಪಂದ್ಯಗಳ ಸರಣಿಯಲ್ಲಿ 2-2 ರಲ್ಲಿ ಸಮಬಲ ಸಾಧಿಸಿದ್ದು, ಇಲ್ಲಿ ಗೆಲ್ಲುವ ತಂಡ ಸರಣಿ ಜಯಿಸಲಿದೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ:ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಗಾಯಗೊಂಡಿದ್ದ ನಾಯಕ ತೆಂಬ ಬವುಮಾ, ಸ್ಪಿನ್ನರ್ ಶಂಶಿ, ಜನಶೇನ್ ಬದಲಾಗಿ, ಟ್ರಿಸ್ಟಾನ್ ಸ್ಟಬ್ಸ್, ಆನ್ರಿಚ್ ನಾರ್ಟ್ಜೆ, ರೀಜಾ ಹೆಂಡ್ರಿಕ್ಸ್ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.