ಜೋಹಾನ್ಸ್‌ಬರ್ಗ್ (ದಕ್ಷಿಣ ಆಫ್ರಿಕಾ):ಸರಣಿಯಲ್ಲಿ2-0 ಹಿನ್ನಡೆಯಲ್ಲಿದ್ದ ದಕ್ಷಿಣ ಆಫ್ರಿಕಾ ಐದು ಪಂದ್ಯಗಳ ಏಕದಿನ ಅಂತರರಾಷ್ಟ್ರೀಯ ಏಕದಿನ ಸರಣಿ ಸಮಬಲಗೊಳಿಸಲು ಅದ್ಭುತ ಪ್ರದರ್ಶನ ನೀಡಿದೆ. ಇದೀಗ ಸರಣಿಯ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲು ದಕ್ಷಿಣ ಆಫ್ರಿಕಾ ಸಜ್ಜಾಗಿದೆ. ದಕ್ಷಿಣಾ ಆಫ್ರಿಕಾದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿ ಸರಣಿ ಗೆಲ್ಲುವ ತವಕದಲ್ಲಿದೆ ಆಸ್ಟ್ರೇಲಿಯಾ.
ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ದ.ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ಅದ್ಭುತ ಫಾರ್ಮ್ನಲ್ಲಿರುವ ತಂಡದ ನಾಯಕ ತೆಂಬ ಬವುಮಾ ಅವರನ್ನು ಲ್ಯಾಬುಸ್ಚಾಗ್ನೆ ರನೌಟ್ ಮಾಡಿದ್ದಾರೆ. ಬವುಮಾ ಖಾತೆ ತೆಗೆಯದೇ ಪೆವಿಲಿಯನ್ ಹಾದಿಹಿಡಿದರು. ದ.ಆಫ್ರಿಕಾ ತಂಡ ಆರು ಓವರ್ಗಳಿಗೆ 1 ವಿಕೆಟ್ ಕಳೆದುಕೊಂಡು 22 ರನ್ಗಳನ್ನು ಕಲೆ ಹಾಕಿ ಆಟ ಮುಂದುವರಿಸಿದೆ.
ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಎರಡು ಸತತ ಗೆಲುವು ದಾಖಲಿಸಿದೆ. ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿ ಮಾರ್ಪಟ್ಟಿದೆ. ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ, ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿದ್ದು, ಎರಡೂ ಸಂದರ್ಭಗಳಲ್ಲಿ ಬೃಹತ್ ಸ್ಕೋರ್ ಗಳಿಸಿತು. ಸರಣಿಯ ನಾಲ್ಕನೇ ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅದ್ಭುತ ಜೊತೆಯಾಟದಿಂದಾಗಿ ನಿಗದಿತ 50 ಓವರ್‌ಗಳಲ್ಲಿ ಐದು ವಿಕೆಟ್ಗಳ ನಷ್ಟಕ್ಕೆ 416 ರನ್ಗಳನ್ನು ಕಲೆ ಹಾಕಿತ್ತು.