ದುಬೈ: ಪ್ಲೇ ಆಫ್ ರೇಸ್ನಿಂದ ಹೊರಬಿದ್ದಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಇಂದು ಕೆಕೆಆರ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಕೆಕೆಆರ್ ಪಾಲಿಗೆ ಅತ್ಯಂತ ಮಹತ್ವದ್ದಾಗಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಕೆಕೆಆರ್ ಆಡಿರುವ 12 ಪಂದ್ಯಗಳಲ್ಲಿ 5 ಜಯ, 7 ಸೋಲುಗಳೊಂದಿಗೆ 4ನೇ ಸ್ಥಾನದಲ್ಲಿದೆ. ಇಷ್ಟೇ ಜಯ ಮತ್ತು ಸೋಲು ಕಂಡಿರುವ ಮುಂಬೈ, ಕೆಕೆಆರ್, ರಾಜಸ್ಥಾನ್ ತಂಡಗಳು ಸಹಾ ಪ್ಲೇ ಆಫ್ನ 4ನೇ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿವೆ. ಒಂದು ವೇಳೆ ಈ ಪಂದ್ಯದಲ್ಲಿ ಸೋಲು ಕಂಡರೆ ಕೋಲ್ಕತ್ತಾ ಪ್ಲೇ ಆಫ್ ಕನಸು ಇತರೆ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಿರುತ್ತದೆ.
ಸನ್ರೈಸರ್ಸ್ ಹೈದರಾಬಾದ್ ಆಡಿರುವ 11 ಪಂದ್ಯಗಳಲ್ಲಿ 9 ಸೋಲು ಹಾಗೂ 2 ಗೆಲುವಿನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಈ ಪಂದ್ಯಗಳ ಗೆಲುವು ಸೋಲು ತಂಡಕ್ಕೆ ಯಾವುದೇ ಬದಲಾವಣೆ ತರುವುದಿಲ್ಲ.
ಆಲ್ರೌಂಡರ್ ಆ್ಯಂಡ್ರೆ ರಸೆಲ್ ಮತ್ತು ಲಾಕಿ ಫರ್ಗುಸನ್ ಗಾಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಇಂದಿನ ಪಂದ್ಯದಲ್ಲೂ ಆಡುವುದು ಅನುಮಾನವಾಗಿದೆ. ಶಕಿಬ್ ಅಲ್ ಹಸನ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಹಾಗಾಗಿ ಬೆಂಚ್ ಕಾದಿರುವ ಆಟಗಾರರಿಗೆ ಅವಕಾಶ ಮಾಡಿಕೊಟ್ಟು ಅವರ ಬೆಳವಣಿಗೆಗೆ ಸಹಕಾರಿಯಾಗುವ ಉದ್ದೇಶವನ್ನು ಹೊಂದಿದೆ.