ನವದೆಹಲಿ: ಐಪಿಎಲ್ನ 28ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿದ್ದು, ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕೇನ್ ವಿಲಿಯಮ್ಸನ್ ಎಸ್ಆರ್ಹೆಚ್ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ವಾರ್ನರ್, ಸಿದ್ದಾರ್ಥ್ ಕೌಲ್ ಮತ್ತು ಜೆ.ಸುಚಿತ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇವರ ಜಾಗದಲ್ಲಿ ಮೊಹಮ್ಮದ್ ನಬಿ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಸಮದ್ ತಂಡಕ್ಕೆ ಮರಳಿದ್ದಾರೆ.
ರಾಯಲ್ಸ್ ಪರ ಉನಾದ್ಕಟ್ ಬದಲಿಗೆ ಕಾರ್ತಿಕ್ ತ್ಯಾಗಿ ಮತ್ತು ದುಬೆ ಬದಲಿಗೆ ಅನುಜ್ ರಾವತ್ ಐಪಿಎಲ್ಗೆ ಪದಾರ್ಪಣೆ ಮಾಡಲಿದ್ದಾರೆ.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ಕೀಪರ್), ಅನುಜ್ ರಾವತ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಾಫಿಜುರ್ ರಹಮಾನ್
ಸನ್ರೈಸರ್ಸ್ ಹೈದರಾಬಾದ್:ಜಾನಿ ಬೈರ್‌ಸ್ಟೋವ್ (ವಿಕೀ), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಮೊಹಮ್ಮದ್ ನಬಿ, ಕೇದಾರ್ ಜಾಧವ್, ವಿಜಯ್ ಶಂಕರ್, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಭುವನೇಶ್ವರ್ ಕುಮಾರ್