ಲಂಡನ್: ಹಲವು ಆಟಗಾರರು ತಮ್ಮ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ನಾನಾ ದಾಖಲೆಗಳನ್ನು ಮಾಡಿದರೂ, ಇಂಗ್ಲೆಂಡ್ ಬೌಲರ್ ಸ್ಟುವರ್ಟ್ ಬ್ರಾಡ್ ಮಾಡಿದ ದಾಖಲೆ ಈವರೆಗೆ ಯಾರೂ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಸಂದರ್ಭದಲ್ಲಿ 146 ವರ್ಷಗಳ ಇತಿಹಾಸ ಇರುವ ಟೆಸ್ಟ್ ಕ್ರಿಕೆಟ್‌ನಲ್ಲಿ ಅಂತ ಒಂದು ದಾಖಲೆಯನ್ನು ಬ್ರಾಡ್ ಬರೆದಿದ್ದಾರೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆಶಸ್‌ನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಟುವರ್ಟ್ ಬ್ರಾಡ್ ಈ ಸಾಧನೆ ಮಾಡಿದ್ದಾರೆ.
ತಮ್ಮ ಕೊನೆಯ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ, ಸ್ಟುವರ್ಟ್ ಬ್ರಾಡ್ ಕೊನೆಯ ಎಸೆತದಲ್ಲಿ ಅದ್ಭುತ ಸಿಕ್ಸರ್ ಬಾರಿಸಿದ್ದರು ಮತ್ತು ಬೌಲಿಂಗ್ ಸಮಯದಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್‌ನಲ್ಲಿ ಕೊನೆಯ ಎಸೆತದಲ್ಲಿ ವಿಕೆಟ್ ಪಡೆದರು. ಹಾಗೆ ನೋಡಿದರೆ, ಮೊದಲ ಬಾರಿಗೆ ಯಾವುದೇ ಒಬ್ಬ ಆಟಗಾರ ತನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದ ಕೊನೆಯ ಎಸೆತದಲ್ಲಿ ಸಿಕ್ಸರ್ ಮತ್ತು ಕೊನೆಯ ಎಸೆತದಲ್ಲಿ ವಿಕೆಟ್ ಪಡೆದ ಸಾಧನೆ ಮಾಡಿಲ್ಲ. ಮಿಚೆಲ್ ಸ್ಟಾರ್ಕ್ ಅವರ ಕೊನೆಯ ಎಸೆತವನ್ನು ಆಡುವಾಗ ಸ್ಟುವರ್ಟ್ ಬ್ರಾಡ್ ಸಿಕ್ಸರ್ ಬಾರಿಸಿದರು, ಬೌಲಿಂಗ್ನಲ್ಲಿ ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ಬೌಲರ್ ಸ್ಟುವರ್ಟ್ ಬ್ರಾಡ್ 37 ವರ್ಷಗಳ ವೃತ್ತಿಜೀವನದಲ್ಲಿ ಸುಮಾರು 16 ವರ್ಷಗಳ ಕಾಲ ಟೆಸ್ಟ್ ಕ್ರಿಕೆಟ್ ಆಡಿದ್ದಾರೆ. ಕೇವಲ 21 ನೇ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ ಬ್ರಾಡ್, ಒಟ್ಟು 167 ಟೆಸ್ಟ್ ಪಂದ್ಯಗಳಲ್ಲಿ 604 ವಿಕೆಟ್ ಪಡೆಯುವ ಮೂಲಕ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರು. ಅಲ್ಲದೇ ಬ್ಯಾಟಿಂಗ್ನಲ್ಲಿ ಅವರು 3,662 ರನ್ ಸಹ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಬ್ರಾಡ್ ಅವರ ಗರಿಷ್ಠ ಸ್ಕೋರ್ 169 ರನ್ ಆಗಿದೆ. ಅವರ ಬ್ಯಾಟ್‌ನಿಂದ ಒಂದು ಶತಕ ಮತ್ತು 13 ಅರ್ಧಶತಕಗಳು ಕೂಡ ಬಂದಿದೆ. ಬೌಲಿಂಗ್ನಲ್ಲಿ ಬ್ರಾಡ್ 20 ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದಾರೆ.