ಹೈದರಾಬಾದ್(ತೆಲಂಗಾಣ): ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. "ನನ್ನ ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ನಾನು ಆಭಾರಿ" ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದಿದ್ದಾರೆ.
ಭಾವನಾತ್ಮಕ ಟ್ವೀಟ್: "ನಾನು ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಿ ನಾಲ್ಕು ವರ್ಷ ಕಳೆದಿವೆ. ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಕ್ರಿಕೆಟ್ ಮಂಡಳಿ, ನಮ್ಮ ತಂಡದ ಕೋಚಿಂಗ್ ಸಿಬ್ಬಂದಿ ಮತ್ತು ನನ್ನ ತಂಡದ ಸಹ ಆಟಗಾರರಿಗೆ ನಾನು ಕೃತಜ್ಞ. ದೇಶೀಯ ಕ್ರಿಕೆಟ್‌ನಲ್ಲಿ ನನ್ನ ತವರು ತಂಡವಾದ ಟ್ರಿನಿಡಾಡ್ ಮತ್ತು ಟೊಬಾಗೊವನ್ನು ಪ್ರತಿನಿಧಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ನನ್ನ ವೃತ್ತಿಜೀವನದಲ್ಲಿ ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು" ಎಂದು ನರೈನ್ ಹೇಳಿದ್ದಾರೆ.
ನರೈನ್ ಕ್ರಿಕೆಟ್ ಸಾಧನೆ: 35 ವರ್ಷ ವಯಸ್ಸಿನ ನರೈನ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 65 ಏಕದಿನ, 51 ಟಿ20ಐ ಮತ್ತು 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಎಲ್ಲಾ ಮಾದರಿಗಳಲ್ಲಿ ಒಟ್ಟು 165 ವಿಕೆಟ್‌ಗಳನ್ನು ಪಡೆದಿದ್ದಾರೆ. ನರೈನ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದು ನಾಲ್ಕು ವರ್ಷಗಳ ಹಿಂದೆ. 2019ರಲ್ಲಿ ಭಾರತ ವಿರುದ್ಧ ಟಿ20 ಪಂದ್ಯ ಆಡಿದ್ದರು. ಈ ಪಂದ್ಯದಲ್ಲಿ ಬೌಲಿಂಗ್ ಮಾಡಿದ ನರೇನ್ ಒಂದೂ ವಿಕೆಟ್ ಪಡೆಯಲಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ನರೈನ್ ಎಂದಿನಂತೆ ದೇಶಿ ಲೀಗ್ಗಳಲ್ಲಿ ಆಡಲಿದ್ದಾರೆ.