ಹೈದರಾಬಾದ್: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಕಳಪೆ ಆರಂಭ ಪಡೆದುಕೊಂಡಿದೆ. ತಾನು ಆಡಿರುವ 6 ಪಂದ್ಯಗಳಿಂದ ಕೇವಲ 1ರಲ್ಲಿ ಗೆಲುವು ಸಾಧಿಸಿ, ಐದರಲ್ಲಿ ಸೋಲು ಕಂಡಿದೆ. ಇದರಿಂದ ಆಕ್ರೋಶಗೊಂಡಿರುವ ಪ್ರಾಂಚೈಸಿ ಇದೀಗ ತಂಡದ ಕ್ಯಾಪ್ಟನ್ ಡೇವಿಡ್ ವಾರ್ನರ್ ತಲೆದಂಡ ಮಾಡಿದೆ.
ಸೋಲುಗಳಿಂದ ಕಂಗೆಟ್ಟ ಸನ್ರೈಸರ್ಸ್ ಹೈದರಾಬಾದ್ ಡೇವಿಡ್ ವಾರ್ನರ್ ಅವರನ್ನ ನಾಯಕತ್ವದಿಂದ ಕೆಳಗಿಳಿಸಿ, ಕೇನ್ ವಿಲಿಯಮ್ಸನ್ಗೆ ನಾಯಕತ್ವ ನೀಡಿದೆ. ಈ ನಿರ್ಧಾರ ಕೈಗೊಳ್ಳುತ್ತಿದ್ದಂತೆ ಕ್ರೀಡಾಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ(2016) ಆರಂಭಗೊಂಡಾಗ ಚೊಚ್ಚಲ ಪ್ರಶಸ್ತಿ ಗೆದ್ದುಕೊಡುವಲ್ಲಿ ವಾರ್ನರ್ ಯಶಸ್ವಿಯಾಗಿದ್ದರು. ಇದಾದ ಬಳಿಕ ಅದ್ಭುತ ಪ್ರದರ್ಶನ ನೀಡಿ ತಂಡವನ್ನ ಪ್ಲೇ-ಆಫ್ ಹಂತಕ್ಕೆ ತೆಗೆದುಕೊಂಡು ಹೋಗಿರುವ ಶ್ರೇಯ ಕೂಡ ಅವರಿಗೆ ಸಲ್ಲುತ್ತದೆ.