ಮುಂಬೈ :ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲಖನೌ ಸೂರಪ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ಸನ್‌ರೈಸರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ಸೋತಿರುವ ಹೈದರಾಬಾದ್ ಸನ್‌ರೈಸರ್ಸ್ ತಂಡ ಲಖನೌ ವಿರುದ್ಧದ ಎರಡನೇ ಪಂದ್ಯದಲ್ಲಿ ಜಯಿಸುವ ಮೂಲಕ ಗೆಲುವಿನ ಹಳಿಗೆ ಬರುವ ಇರಾದೆಯಲ್ಲಿದೆ.
ಅಲ್ಲದೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್ಗಳಿಂದ ಗೆದ್ದಿರುವ ಕೆಎಲ್ ರಾಹುಲ್ ನೇತೃತ್ವದ ಪಡೆ ಕೇನ್ ವಿಲಿಯಮ್ಸನ್ ಪಡೆಯನ್ನು ಹಣಿಯುವ ಹುಮ್ಮಸ್ಸಿನಲ್ಲಿದೆ.
ಜಾಸನ್ ಹೋಲ್ಡರ್ಗೆ ಕ್ಯಾಪ್ :ಇನ್ನು ಈ ಪಂದ್ಯದಲ್ಲಿ ವಿದೇಶಿ ಕೋಟಾದಲ್ಲಿ ವೆಸ್ಟ್ ಇಂಡೀಸ್ ಆಟಗಾರ ಜಾಸನ್ ಹೋಲ್ಡರ್ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ಶ್ರೀಲಂಕಾದ ಚಮೀರಾರನ್ನು ಕೈಬಿಡಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.