ನವದೆಹಲಿ:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನಿಯಮಾವಳಿ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಹೀಗಾಗಿ, ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಮುಂದಿನ 3 ವರ್ಷಗಳ ಕಾಲ ತಮ್ಮ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
ಪ್ರಕರಣದ ವಿವರ:ಬಿಸಿಸಿಐ ಪದಾಧಿಕಾರಿಗಳ ಅಧಿಕಾರವನ್ನು ವಿಸ್ತರಿಸಲು ಬಿಸಿಸಿಐ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಇದನ್ನು ಮಾನ್ಯ ಮಾಡಬೇಕೆಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 2020 ರಲ್ಲಿ ಅರ್ಜಿ ಸಲ್ಲಿಸಿತ್ತು. ಬಿಸಿಸಿಐ ಸಂವಿಧಾನದ ನಿಯಮಗಳ ಪ್ರಕಾರ ಅಧ್ಯಕ್ಷ, ಕಾರ್ಯದರ್ಶಿ, ಉಪಾಧ್ಯಕ್ಷ, ಖಜಾಂಚಿ, ಜಂಟಿ ಕಾರ್ಯದರ್ಶಿಗಳು ಒಮ್ಮೆ 6 ವರ್ಷಗಳ ಕಾಲ ರಾಜ್ಯ, ರಾಷ್ಟ್ರೀಯ ಕ್ರಿಕೆಟ್ ಮಂಡಳಿಯಲ್ಲಿ ಕಾರ್ಯನಿರ್ವಹಿಸಿದರೆ, ಮುಂದಿನ 3 ವರ್ಷಗಳ ಕಾಲ ಬಿಸಿಸಿಐನಲ್ಲಿ ಯಾವುದೇ ಉನ್ನತ ಹುದ್ದೆಯನ್ನು ಅಲಂಕರಿಸಲು ಅನುಮತಿಯಿಲ್ಲ. ಆದರೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರವಧಿಯನ್ನು ವಿಸ್ತರಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇದನ್ನೂ ಓದಿ:ಬಿಸಿಸಿಐ ಪದಾಧಿಕಾರಿಗಳ ಅಧಿಕಾರವಧಿ ವಿಸ್ತರಣೆ ಅರ್ಜಿ.. ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್