ದುಬೈ : ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ಆಡಿದ ಟಿ-20 ಮತ್ತು ಏಕದಿನ ಸರಣಿಯನ್ನು ಗೆದ್ದುಕೊಂಡಿದೆ. ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಇತ್ತೀಚಿನ ಐಸಿಸಿ ಪುರುಷರ ಟಿ 20 ಶ್ರೇಯಾಂಕದಲ್ಲಿ ಭಾರಿ ಏರಿಕೆ ಕಂಡಿದ್ದಾರೆ.
ಸೂರ್ಯಕುಮಾರ್ ಈ ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇವರು ಟಿ-20 ರ್ಯಾಂಕಿಂಗ್ನಲ್ಲಿ 21ನೇ ಸ್ಥಾನ ಪಡೆದಿದ್ದಾರೆ. ವೆಂಕಟೇಶ್ ಅಯ್ಯರ್ 115ನೇ ಸ್ಥಾನದಲ್ಲಿದ್ದಾರೆ.
ಕೆಎಲ್ ರಾಹುಲ್ ಎರಡು ಸ್ಥಾನ ಕುಸಿತದಿಂದ ಆರನೇ ಸ್ಥಾನಕ್ಕಿಳಿದ್ದಾರೆ. ವಿರಾಟ್ ಕೊಹ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿಯೇ ಉಳಿದಿದ್ದಾರೆ. ಬೌಲರ್‌ಗಳು ಮತ್ತು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ 10ರಲ್ಲಿ ಯಾವುದೇ ಭಾರತೀಯರು ಕಾಣಿಸಿಲ್ಲ. ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ ಐದು ಸ್ಥಾನಗಳ ಬಡ್ತಿ ಪಡೆದು ನಂ.13ಕ್ಕೆ ತಲುಪಿದ್ದಾರೆ.