ನವದೆಹಲಿ:ಕೈಬೆರಳಿನ ಮುರಿತಕ್ಕೆ ಒಳಗಾಗಿ ಸಂಪೂರ್ಣ ಚೇತರಿಸಿಕೊಳ್ಳದ ಸೂರ್ಯಕುಮಾರ್ ಯಾದವ್ ಮಾರ್ಚ್ 27ರಂದು ಡೆಲ್ಲಿ ವಿರುದ್ಧ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈ ಇಂಡಿಯನ್ಸ್ ರಿಟೈನ್ ಮಾಡಿರುವ ನಾಲ್ವರು ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ವೇಳೆ ಗಾಯಗೊಂಡು ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಎನ್ಸಿಎನಲ್ಲಿ ಪುನಶ್ಚೇತನ ತರಬೇತಿಯಲ್ಲಿದ್ದಾರೆ.
ಸೂರ್ಯಕುಮಾರ್ ಯಾದವ್ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಮೊದಲ ಪಂದ್ಯದಲ್ಲಿ ಮುಂಬೈನ ಪರ ಆಡುವುದು ಕಠಿಣವಾಗಬಹುದು ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ಮಾಹಿತಿ ನೀಡಿವೆ.