ಮೆಲ್ಬೋರ್ನ್(ಆಸ್ಟ್ರೇಲಿಯಾ):ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಿನ್ನೆ ನಡೆದ ಟಿ20 ವಿಶ್ವಕಪ್‌ನ ಲೀಗ್ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆಯನ್ನು 71 ರನ್‌ಗಳ ಅಂತರದಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದೀಗ ಇಂಗ್ಲೆಂಡ್ ಜತೆ ಸೆಮಿಫೈನಲ್ ಕಾದಾಟಕ್ಕೆ ರೋಹಿತ್ ಬಳಗ ಸಿದ್ಧತೆ ನಡೆಸುತ್ತಿದೆ.
ವಿರಾಟ್ ಕೊಹ್ಲಿ 5 ಪಂದ್ಯದಲ್ಲಿ 246 ರನ್ ಗಳಿಸುವ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಅತಿಹೆಚ್ಚು ರನ್ ಗಳಿಸಿ ಮುಂಚೂಣಿ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಟೂರ್ನಿಯಲ್ಲಿ 223 ರನ್ ಗಳಿಸಿದ್ದಾರೆ. ಈ ವರ್ಷ 1,200 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಅವರು ಅಂತಾರಾಷ್ಟ್ರೀಯ ಟಿ20ಯಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ನಿನ್ನೆಯ ಪಂದ್ಯದಲ್ಲೂ ಕೂಡಾ 25 ಎಸೆತಗಳಲ್ಲಿ 61ರನ್ ಬಾರಿಸಿದರು.
ಇನ್ನು ಬೌಲಿಂಗ್ ವಿಭಾಗದಲ್ಲೂ ವೇಗಿಗಳು ನಿರೀಕ್ಷಿತ ಪ್ರದರ್ಶನ ನೀಡುತ್ತಿದ್ದಾರೆ. ಎಡಗೈ ವೇಗಿ ಅರ್ಶ್‌ದೀಪ್ 5 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ್ದು ಭಾರತದ ಪರವಾಗಿ ಅತಿಹೆಚ್ಚು ವಿಕೆಟ್ ಪಡೆದವರಾಗಿದ್ದಾರೆ. ಶ್ರೀಲಂಕಾದ ಬೌಲರ್ ವನಿಂದು ಹಸರಂಗ 15 ವಿಕೆಟ್ ಪಡೆದುಕೊಂಡು ವಿಶ್ವಕಪ್ ಅತಿ ಹೆಚ್ಚು ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. (ಅರ್ಹತಾ ಪಂದ್ಯಗಳೂ ಸೇರಿ).