ಟಿ 20 ವಿಶ್ವಕಪ್ನ ಸೂಪರ್12ರ ನಿರ್ಣಾಯಕ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲನುಭವಿಸಿದೆ. ಈ ಮೂಲಕ ಹರಿಣಗಳ ತಂಡಕ್ಕೆ ಸೆಮಿ ಎಂಟ್ರಿ ದುರ್ಗಮವಾಗಲಿದೆ. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ ಸೆಮಿಫೈನಲ್ ಎಂಟ್ರಿ ಖಚಿತವಾಗಿದೆ.
ಅಡಿಲೇಡ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೆದರ್ಲೆಂಡ್ ವಿರುದ್ಧದ ಪಂದ್ಯ ದಕ್ಷಿಣ ಆಫ್ರಿಕಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದ್ರೆ ದಕ್ಷಿಣ ಆಫ್ರಿಕಾ ಸೋತು ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.
ನೆದರ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. 159 ರನ್‌ಗಳ ಗುರಿ ಬೆನ್ನತ್ತಿದ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 145 ರನ್ ಗಳಿಸಿತು. ಈ ಮೂಲಕ 13 ರನ್‌ಗಳಿಂದ ಸೋಲೊಪ್ಪಿಕೊಂಡಿತು.