ಸಿಡ್ನಿ:ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಹಣಾಹಣಿಯಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಕೆಲಕಾಲ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಟವು ಕೊಂಚ ವಿಳಂಬವಾಗಿ ಮುಕ್ತಾಯವಾಯಿತು. ಹೀಗಾಗಿ ಭಾರತ ಹಾಗೂ ನೆದರ್ಲ್ಯಾಂಡ್ಸ್ ಪಂದ್ಯವು ನಿಗದಿತ ಸಮಯಕ್ಕಿಂಂತ ತಡವಾಗಿ ಆರಂಭಗೊಂಡಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚುಟುಕು ಕ್ರಿಕೆಟ್ ಅಭಿಯಾನದ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿದ್ದು, ಆತ್ಮ ವಿಶ್ವಾಸದಲ್ಲಿದೆ. ಇದೇ ತಂಡವನ್ನು ಇಂದಿನ ಪಂದ್ಯಕ್ಕೂ ಮುಂದುವರೆಸಲಾಗಿದೆ. ಇನ್ನೊಂದೆಡೆ ಬಾಂಗ್ಲಾದೇಶ ಜೊತೆಗಿನ ಪ್ರಥಮ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಸೋತಿದ್ದು, ಇಂದು ಭಾರತದ ಜೊತೆ ಸೆಣೆಸಾಡಲಿದೆ.