ದುಬೈ: ಭಾರತ ತಂಡದ ಮೆಂಟರ್ ಎಂ ಎಸ್ ಧೋನಿ ಹಾಗೂ ವೆಸ್ಟ್ ಇಂಡೀಸ್ ಆರಂಭಿಕ ಬ್ಯಾಟರ್ ಕ್ರಿಸ್ ಗೇಲ್ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದ ವೇಳೆ ಭೇಟಿಯಾಗಿ ಮಾತನಾಡಿದ್ದು ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದೆ. ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಮತ್ತೊಂದು ಕಡೆ ಕ್ರಿಕೆಟ್ ಜಗತ್ತಿನ ಸ್ಫೋಟಕ ಬ್ಯಾಟರ್ ಒಂದೆಡೆ ಸೇರಿದ್ದನ್ನು ಅವಿಸ್ಮರಣೀಯ ಕ್ಷಣ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಸೋಮವಾರ ನಡೆದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಆಂಗ್ಲರ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ನೀಡಿದ್ದ 189 ರನ್ಗಳ ಗುರಿಯನ್ನು ಇನ್ನು ಒಂದು ಓವರ್ ಉಳಿದಿರುವಂತೆ ಟೀಮ್ ಇಂಡಿಯಾ ಚೇಸ್ ಮಾಡಿ ಗೆದ್ದುಕೊಂಡಿತು.
ಈ ಪಂದ್ಯಕ್ಕೂ ಮುನ್ನ ಲೆಜೆಂಡರಿ ಕ್ರಕೆಟಿಗರಾದ ಕ್ರಿಸ್ ಗೇಲ್ ಮತ್ತು ಎಂ ಎಸ್ ಧೋನಿ ಮೈದಾನದಲ್ಲಿ ಕಾಣಿಸಿಕೊಂಡು ಚರ್ಚೆ ಮಾಡುತ್ತಿರುವ ಫೋಟೋವನ್ನು ಬಿಸಿಸಿಐ ತನ್ನ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದೆ.