ದುಬೈ: ಟಿ20 ವಿಶ್ವಕಪ್ ಸೂಪರ್ 12ನಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದ ತಂಡವನ್ನೇ ಕಣಕ್ಕಿಳಿಸುತ್ತಿದೆ. ಶ್ರೀಲಂಕಾ ತಂಡ ಗಾಯದಿಂದ ಚೇತರಿಸಿಕೊಂಡಿರುವ ಮಹೀಶ್ ತೀಕ್ಷಾನಗೆ ಅವಕಾಶ ನೀಡಿದೆ. ಬಿನುರು ಫರ್ನಾಂಡೊ ತಂಡದಿಂದ ಹೊರಬಿದ್ದಿದ್ದಾರೆ.
ಆಸ್ಟ್ರೇಲಿಯಾ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿದೆ. ಶ್ರೀಲಂಕಾ ತಂಡ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಎರಡೂ ತಂಡಗಳಲ್ಲೂ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುವ ಆಟಗಾರರಿರುವ ಕಾರಣ ಇಂದಿನ ಪಂದ್ಯ ಕುತೂಹಲ ಹೆಚ್ಚಿಸಿದೆ.
ಆಸ್ಟ್ರೇಲಿಯಾದಲ್ಲಿ ಸ್ಟೀವ್ ಸ್ಮಿತ್, ಆ್ಯರೊನ್ ಫಿಂಚ್, ಡೇವಿಡ್ ವಾರ್ನರ್, ಮಿಚಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್ರಂತಹ ಬ್ಯಾಟರ್ಗಳಿದ್ದಾರೆ. ಆದರೆ ಫಿಂಚ್, ವಾರ್ನರ್ ಕಳಪೆ ಬ್ಯಾಟಿಂಗ್ನಿಂದ ಹೆಣಗಾಡುತ್ತಿದ್ದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು. ಆದರೆ ಮ್ಯಾಕ್ಸ್‌ವೆಲ್ ಆಲ್ರೌಂಡ್ ಪ್ರದರ್ಶನ ಎದುರಾಳಿ ತಂಡಕ್ಕೆ ಅಪಾಯಕಾರಿಯಾಗಬಹುದು.