ಕಾಬೂಲ್: ಅಫ್ಘಾನಿಸ್ತಾನವನ್ನು ಬಹುಪಾಲು ವಶಪಡಿಸಿಕೊಂಡಿರುವ ತಾಲಿಬಾನ್ ಉಗ್ರರು, ಎಲ್ಲಾ ರಂಗದಲ್ಲೂ ತಮ್ಮ ಅಧಿಪತ್ಯ ಸ್ಥಾಪಿಸುತ್ತಿದ್ದಾರೆ. ಈಗಷ್ಟೇ ವಿಶ್ವದ ಟಾಪ್ ತಂಡಗಳೊಡನೆ ಗುರುತಿಸಿಕೊಳ್ಳುತ್ತಿದ್ದ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ತಾಲಿಬಾನ್ ತಿಳಿಸಿದೆ ಎನ್ನಲಾಗಿದೆ.
ತಾಲಿಬಾನ್ ಅಧಿಪತ್ಯದ ನಂತರ ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ತಂಡ ಆಡುವುದೇ? ಇಲ್ಲವೇ? ಎಂಬ ಪ್ರಶ್ನೆ ಕೆಲವು ದಿನಗಳಿಂದ ಕೇಳಿ ಬರುತ್ತಿತ್ತು. ಇದೀಗ ಕ್ರಿಕೆಟ್ ಮಂಡಳಿ ಜೊತೆ ಮಾತುಕತೆ ನಡೆಸಿರುವ ತಾಲಿಬಾನ್, ತಮ್ಮ ಕ್ರಿಕೆಟ್ ತಂಡಕ್ಕೆ ಬೆಂಬಲ ನೀಡಿದೆ.