ಗುವಾಹಟಿ :ದೇಶಿ ಕ್ರಿಕೆಟ್ನಲ್ಲಿ ತಮಿಳುನಾಡಿನ ಶಾರುಖ್ ಖಾನ್ ಅವರ ಸ್ಫೋಟಕ ಬ್ಯಾಟಿಂಗ್ ಮುಂದುವರಿದಿದೆ. ದೆಹಲಿ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲೂ ಬೌಂಡರಿ-ಸಿಕ್ಸರ್ಗಳ ಸುರಿಮಳೆಗೈದಿದ್ದಾರೆ.
ತಮಿಳುನಾಡು 165ಕ್ಕೆ5 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಬ್ಯಾಟಿಂಗ್ಗೆ ಇಳಿದ ಶಾರುಖ್, ದೆಹಲಿ ಬೌಲರ್ಗಳನ್ನು ಧೂಳೀಪಟ ಮಾಡಿದ್ದಾರೆ. 52 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅವರು, 89 ಎಸೆತಗಳಲ್ಲಿ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಮೊದಲ ಶತಕ ಸಿಡಿಸಿದರು.
ನಂತರ 24 ಎಸೆತಗಳಲ್ಲಿ 150 ರನ್ ಗಡಿ ದಾಟಿದರು. ಅವರ 132.7ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟಿಂಗ್ ಮಾಡಿದ ಯುವ ಬ್ಯಾಟರ್ ಒಟ್ಟಾರೆ 148 ಎಸೆತಗಳಲ್ಲಿ 20 ಬೌಂಡರಿ ಮತ್ತು 10 ಸಿಕ್ಸರ್ಗಳ ಸಹಿತ 198 ರನ್ಗಳಿಸಿ ವಿಕೆಟ್ ಒಪ್ಪಿಸಿದರು.