ಕೇಪ್ ಟೌನ್: ಟೆಸ್ಟ್ ಸರಣಿ, ನಂತರ ಏಕದಿನ ಸರಣಿಯನ್ನು ಕಳೆದುಕೊಂಡಿರುವ ಭಾರತ ತಂಡ ಇದೀಗ ಗೌರವ ಉಳಿಸಿಕೊಳ್ಳುವ ಕೊನೆಯ ಏಕದಿನ ಪಂದ್ಯದಲ್ಲಿ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತುದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ನಾಯಕ ಕೆಎಲ್ ರಾಹುಲ್ ಚೇಸಿಂಗ್ ಮಾಡಲು ನಿರ್ಧರಿಸಿದ್ದಾರೆ.
ಪಾರ್ಲ್ನಲ್ಲಿ ನಡೆದಿದ್ದ ಮೊದಲೆರಡು ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಚೇಸ್ ಮಾಡಲು ಮತ್ತು 2ನೇ ಪಂದ್ಯದಲ್ಲಿ ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾಗಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಚೇಸಿಂಗ್ ಮಾಡಲಿದೆಯೇ ಎಂದು ಕಾದುನೋಡಬೇಕಿದೆ.
ಇನ್ನು ಭಾರತ ತಂಡದಲ್ಲಿ 4 ಬದಲಾವಣೆ ಮಾಡಿಕೊಳ್ಳಲಾಗಿದ್ದು,ಅಶ್ವಿನ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್ ಮತ್ತು ವೆಂಕಟೇಶ್ ಅಯ್ಯರ್ ಬದಲಿಗೆ ಜಯಂತ್ ಯಾದವ್, ಪ್ರಸಿಧ್ ಕೃಷ್ಣ, ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಚಹರ್ಗೆ ಅವಕಾಶ ನೀಡಲಾಗಿದೆ.
ಇತ್ತ ಸರಣಿ ಗೆದ್ದಿರುವ ಸಂಭ್ರಮದಲ್ಲಿದ್ದರೂ ದಕ್ಷಿಣ ಆಫ್ರಿಕಾ ಮಾತ್ರ ಭಾರತದ ವಿರುದ್ದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ದೃಷ್ಠಿಯಿಂದ ಕೇವಲ ಒಂದು ಬದಲಾವಣೆ ಮಾಡಿಕೊಂಡಿದೆ. ಸ್ಪಿನ್ನರ್ ಶಮ್ಸಿ ಬದಲಿಗೆ ಆಲ್ರೌಂಡರ್ ಡ್ವೇನ್ ಪ್ರಿಟೋರಿಯಸ್ ಅವಕಾಶ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ : ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್(ವಿಕೀ), ಟೆಂಬಾ ಬವೂಮ(ನಾಯಕ), ಐಡೆನ್ ಮಾರ್ಕ್ರಮ್, ರಾಸ್ಸಿ ವ್ಯಾನ್ ಡೆರ್ ಡಸೆನ್, ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಡ್ವೈನ್ ಪ್ರಿಟೋರಿಯಸ್, ಲುಂಗಿ ಎನ್‌ಗಿಡಿ, ಸಿಸಂದಾ ಮಗಾಲಾ
ಭಾರತ : ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಇದನ್ನೂ ಓದಿ:U19 ವಿಶ್ವಕಪ್: ಉಗಾಂಡ ವಿರುದ್ಧ ಭಾರತ ಕಿರಿಯರಿಗೆ ದಾಖಲೆಯ 326 ರನ್ಗಳ ಜಯ