ಲಾಹೋರ್ :ಭದ್ರತಾ ಕಾರಣದಿಂದ ಪಾಕಿಸ್ತಾನ ಪ್ರವಾಸ ರದ್ದುಗೊಳಿಸಿರುವ ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ತಂಡಗಳ ವಿರುದ್ಧ ಅಸಮಾಧಾನ ಹೊರ ಹಾಕಿರುವ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, ನಾವು ಅವರನ್ನು ಮೈದಾನದಲ್ಲಿ ಸೋಲಿಸುವ ಮೂಲಕ ಸೇಡು ತೀರಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ರಾವಲ್ಪಿಂಡಿಯಲ್ಲಿ ಮೊದಲ ಏಕದಿನ ಪಂದ್ಯ ನಡೆಯುವ ಕೇವಲ ಒಂದು ಗಂಟೆಯಿರುವಾಗ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ ಭದ್ರತಾ ಕಾರಣ ನೀಡಿ ಇಡೀ ಪ್ರವಾಸವನ್ನೇ ರದ್ದುಗೊಳಿಸಿತ್ತು. ಸೋಮವಾರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕೂಡ ತನ್ನ ಮಹಿಳಾ ಮತ್ತು ಪುರುಷ ತಂಡಗಳು ಅಕ್ಟೋಬರ್ನಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಳ್ಳವುದಿಲ್ಲ ಎಂದು ಘೋಷಣೆ ಮಾಡಿದ್ದವು.
ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸುವ ಇಸಿಬಿ ನಿರ್ಧಾರ ಪಿಸಿಬಿಯ ತವರಿನ ಆವೃತ್ತಿ ಆಯೋಜನೆಗೆ ಭಾರಿ ಹೊಡೆತ ನೀಡಿದೆ. ಪಿಸಿಬಿ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಅಧ್ಯಕ್ಷ ರಮೀಜ್, "ಇಂಗ್ಲೆಂಡ್ ಪ್ರವಾಸದಿಂದ ಹಿಂದೆ ಸರಿದಿರುವುದರಿಂದ ನಾನು ತೀವ್ರ ನಿರಾಶೆಗೊಂಡಿದ್ದೇನೆ. ಆದರೆ, ಅದನ್ನು ನಾವು ಮೊದಲೇ ನಿರೀಕ್ಷಿಸಿದ್ದೆವು. ಯಾಕೆಂದರೆ, ಈ ಪಾಶ್ಚಿಮಾತ್ಯ ರಾಷ್ಟ್ರಗಳು ಒಂದುಗೂಡುತ್ತವೆ ಮತ್ತು ಪರಸ್ಪರ ಬೆಂಬಲಿಸಲು ಪ್ರಯತ್ನಿಸುತ್ತವೆ ಎಂಬುದು ತಿಳಿದಿತ್ತು" ಎಂದು ಹೇಳಿಕೊಂಡಿದ್ದಾರೆ.
ನೀವು ಭದ್ರತಾ ಬೆದರಿಕೆ ಮತ್ತು ಗ್ರಹಿಕೆಯ ಆಧಾರದ ಮೇಲೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ನಮಗೆ ಕೋಪವಿದೆ. ಯಾಕೆಂದರೆ, ಮೊದಲು ನ್ಯೂಜಿಲ್ಯಾಂಡ್ ತಂಡದವರು ಎದುರಿಸುತ್ತಿರುವ ಬೆದರಿಕೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳದೆ ದೂರ ಹೋಯಿತು. ಈಗ ಇಂಗ್ಲೆಂಡ್ ಈ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು.