ಭಾರತ ಐರ್ಲೆಂಡ್ ಎದುರು ಎರಡು ಟಿ 20 ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯ ಇಂದು ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯುತ್ತದೆ. ಈ ಪಂದ್ಯದಲ್ಲಿ ಕಾಶ್ಮೀರಿ ಯುವ ವೇಗಿ ಉಮ್ರಾನ್ ಮಲಿಕ್ ಪಾದಾರ್ಪಣೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಂದ ಮಲಿಕ್ ಕ್ಯಾಪ್ ಪಡೆದು ಪಾದಾರ್ಪಣೆ ಮಾಡಿದರು.
ಐಪಿಎಲ್ನಲ್ಲಿ ಮಲಿಕ್ ಸನ್ ರೈಸರ್ಸ್ ಹೈದರಾಬಾದ್ ಪರ ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 15 ನೇ ಆವೃತ್ತಿಯ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗಂಟೆಗೆ 157 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಬಾರಿ ಐಪಿಎಲ್ನಲ್ಲಿ ಮಲಿಕ್ 47 ಓವರ್ಗಳಲ್ಲಿ 21 ವಿಕೆಟ್ ಪಡೆದಿದ್ದಾರೆ.