ನಾಗ್ಪುರ, ಮಹಾರಾಷ್ಟ್ರ: ಮುಂಬರುವ ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ನಾಗ್ಪುರಕ್ಕೆ ತಲುಪಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ವಿದರ್ಭ ಕ್ರಿಕೆಟ್ ಸಂಸ್ಥೆ (ವಿಸಿಎ) ಕ್ರೀಡಾಂಗಣದಲ್ಲಿ ನಡೆಯಲಿದೆ. ವಿಸಿಎ ಸ್ಟೇಡಿಯಂ ಐದು ವರ್ಷಗಳ ನಂತರ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ದಿನಗಳ ತರಬೇತಿ ಶಿಬಿರ ನಡೆಸುತ್ತಿದೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉಪನಾಯಕನ ಜವಾಬ್ದಾರಿಯನ್ನು ಕೆಎಲ್ ರಾಹುಲ್ ವಹಿಸಿಕೊಳ್ಳಲಿದ್ದಾರೆ. ಜನವರಿ 23 ರಂದು ಅಥಿಯಾ ಶೆಟ್ಟಿ ಅವರೊಂದಿಗೆ ರಾಹುಲ್ ಸಪ್ತಪದಿ ತುಳಿದು ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾಗಿ 11 ದಿನಗಳ ನಂತರ ಮತ್ತೆ ಆಟದ ಕ್ಷೇತ್ರಕ್ಕೆ ಮರಳಿದ್ದಾರೆ. ಟೆಸ್ಟ್ ಸರಣಿಯಿಂದಾಗಿ ಅವರು ಹನಿಮೂನ್‌ಗೂ ಹೋಗಿಲ್ಲ ಎಂಬ ಮಾತಿದೆ. ಮದುವೆಯ ಆರತಕ್ಷತೆ ಇನ್ನೂ ನಡೆದಿಲ್ಲ. ರಾಹುಲ್ 2014ರಲ್ಲಿ ಮೆಲ್ಬೋರ್ನ್‌ನಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ರಾಹುಲ್ ಅವರಿಗೆ ಡೆಬ್ಯೂ ಕ್ಯಾಪ್ ನೀಡಿ ತಂಡಕ್ಕೆ ಬರಮಾಡಿಕೊಂಡಿದ್ದರು.
ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಬಾರ್ಡರ್ ಗವಾಸ್ಕರ್ ಸರಣಿಗೆ ಫಿಟ್ ಆಗಿದ್ದಾರೆ. ಹಲವು ತಿಂಗಳು ರಾಷ್ಟ್ರೀಯ ತಂಡದಿಂದ ಹೊರಗುಳಿದಿದ್ದರು. ಆಲ್ ರೌಂಡರ್ ಜಡೇಜಾ ಅವರಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಅನುಮತಿ ನೀಡಿದೆ. ಜಡೇಜಾ ಆಗಸ್ಟ್ 2022 ರಲ್ಲಿ ಹಾಂಕಾಂಗ್ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು. ಪಂದ್ಯದ ವೇಳೆ ಮೊಣಕಾಲಿಗೆ ಗಾಯವಾಗಿತ್ತು. ಗಾಯದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದರಿಂದಾಗಿ ಅವರು 5 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದರು.
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ
1 ನೇ ಟೆಸ್ಟ್ - 9 ರಿಂದ 13 ಫೆಬ್ರವರಿ, ನಾಗ್ಪುರ