ಅಡಿಲೇಡ್ (ಆಸ್ಟ್ರೇಲಿಯಾ):ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟಿ20 ಇತಿಹಾಸದಲ್ಲೇ 4 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಗುರುವಾರ ಟಿ20 ವಿಶ್ವಕಪ್‌ನ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರನ್ ಮಷಿನ್ ಖ್ಯಾತಿಯ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಟಿ20 ವಿಶ್ವಕಪ್ನಲ್ಲೇ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಕೂಡ ವಿರಾಟ್ ಹೆಸರಲ್ಲೇ ಇದೆ.
ಇದೇ ಅಡಿಲೇಡ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಟಿ20 ವಿಶ್ವಕಪ್ನಲ್ಲೇ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದರು. ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಲ್ಲಿದ್ದ 1016 ರನ್‌ಗಳ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದರು.