ಡೊಮಿನಿಕಾ:ಭಾರತ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ನಲ್ಲಿ 8,500 ರನ್‌ಗಳನ್ನು ಪೂರೈಸುವ ಮೂಲಕ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ವಿಂಡ್ಸರ್ ಪಾರ್ಕ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಈ ಮಹತ್ವದ ಮೈಲಿಗಲ್ಲನ್ನು ತಲುಪಿದ್ದಾರೆ.
ಸೆಹ್ವಾಗ್ ತಮ್ಮ 12 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ 103 ಟೆಸ್ಟ್ ಪಂದ್ಯಗಳಲ್ಲಿ 8503 ರನ್‌ಗಳನ್ನು ಕಲೆ ಹಾಕಿದ್ದರು. ತಮ್ಮ 110ನೇ ಟೆಸ್ಟ್ನಲ್ಲಿ 25 ರನ್ಗಳಿಸುವ ಮೂಲಕ ಕೊಹ್ಲಿ ಸೆಹ್ವಾಗ್ ಅವರ ದಾಖಲೆ ಮುರಿದರು. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 8515 ರನ್ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ಗಳಿಸಿದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ.
ಕ್ರಿಕೆಟ್ ದೇವರು ಎಂದೇ ಪ್ರಸಿದ್ಧಿ ಪಡೆದಿರುವಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಸಚಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 15,921 ರನ್ ಗಳಿಸಿದ್ದಾರೆ. ನಂತರ ರಾಹುಲ್ ದ್ರಾವಿಡ್ 13,288 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, 10,122 ರನ್ನಗಳೊಂದಿಗೆ ಸುನಿಲ್ ಗವಾಸ್ಕರ್ ಮೂರನೇ ಸ್ಥಾನ, 8,781 ರನ್ಗಳೊಂದಿಗೆ ವಿವಿಎಸ್ ಲಕ್ಷ್ಮಣ್ ನಾಲ್ಕನೇ ಸ್ಥಾನದಲ್ಲಿದ್ದಾರೆ.